4:54 PM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ ಕುರಿತು ಚರ್ಚೆ

28/10/2024, 22:39

ಮಂಗಳೂರು(reporterkarnataka.com): ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಅವರು ಕಾಮನ್‍ವೆಲ್ತ್ ಸಂಸದೀಯ ಸಂಘ, ಕರ್ನಾಟಕ ಶಾಖೆ ಇದರ ಪ್ರತಿನಿಧಿಯಾಗಿ ಆಸ್ಟ್ರೇಲಿಯಾ ದೇಶದ ಸಿಡ್ನಿಯಲ್ಲಿ ನವೆಂಬರ್ 5 ರಿಂದ 8ವರೆಗೆ ನಡೆಯಲಿರುವ 67ನೇ ಕಾಮನ್‍ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಅಕ್ಟೋಬರ್ 25ರಿಂದ 28ರವರೆಗೆ ದಕ್ಷಿಣ ಕೊರಿಯಾ ದೇಶದಲ್ಲಿ ಅಧ್ಯಯನ ಪ್ರವಾಸ ಕೈಗೊಂಡರು.
ಈ ಅಧ್ಯಯನ ಪ್ರವಾಸ ಸಂದರ್ಭದಲ್ಲಿ ಸ್ಪೀಕರ್ ಅವರು ದಕ್ಷಿಣ ಕೊರಿಯಾದ ಸಿಯೋಲ್‍ನಲ್ಲಿ ಭಾರತದ ರಾಯಭಾರಿ ಅಮಿತ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಉಭಯ ದೇಶಗಳ ಸಂಬಂಧಗಳು, ಶಿಕ್ಷಣ, ವ್ಯಾಪಾರ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಅನೌಪಚಾರಿಕವಾಗಿ ಚರ್ಚಿಸುತ್ತಾ, ದಕ್ಷಿಣ ಕೊರಿಯಾ ದೇಶದ. ಕರ್ನಾಟಕದಲ್ಲಿ ಹೂಡಿಕೆಯ ನಿರೀಕ್ಷೆಗಳು/ಅವಕಾಶಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡರು. ಸಭಾಧ್ಯಕ್ಷರು ಕರ್ನಾಟಕದ ವಿಶ್ವವಿದ್ಯಾಲಯಗಳು ಕೊರಿಯಾ ದೇಶದ ವಿಶ್ವವಿದ್ಯಾಲಯಗಳೊಂದಿಗೆ ಕಾಲೇಜುಗಳಲ್ಲಿನ ವಿವಿಧ ಕೋರ್ಸ್‍ಗಳ ಮತ್ತು ಉದ್ಯೋಗಾವಕಾಶಗಳ ಕುರಿತು ಪರಸ್ಪರ ಒಪ್ಪಂದಗಳನ್ನು ಮಾಡಿಕೊಳ್ಳುವ ಬಗ್ಗೆ ಭಾರತದ ರಾಯಭಾರಿಗಳೊಂದಿಗೆ ಚರ್ಚಿಸಿದರು.
ಉಭಯ ದೇಶಗಳ ಮೂಲಸೌಲಭ್ಯಗಳು, ಆರ್ಥಿಕತೆ ಕುರಿತಾಗಿ ಚರ್ಚಿಸಿ ಈ ಭೇಟಿಯು ಫಲಪ್ರದವಾಗಿದ್ದು, ವಿಶೇಷವಾಗಿ ದಕ್ಷಿಣ ಕೊರಿಯಾ ಮತ್ತು ಕರ್ನಾಟಕದ ನಡುವಿನ ಸಂಬಂಧಗಳು ಇನ್ನು ಹೆಚ್ಚಿನ ರೀತಿ ಬೆಳೆಯಲಿ ಎಂದು ಸಭಾಧ್ಯಕ್ಷರು ಆಶಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು