12:56 PM Saturday19 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ಆಯುರ್ವೇದ ದಿನಾಚರಣೆ: ಅಸಮರ್ಪಕ ಜೀವನಶೈಲಿಯಿಂದ ಆರೋಗ್ಯಕ್ಕೆ ಆಪತ್ತು

30/10/2024, 11:10

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಮ್ಮ ದೈನಂದಿನ ಜೀವನದಲ್ಲಿ ಶಿಸ್ತುರಹಿತ ಆಹಾರ ಸೇವನೆ ಮತ್ತು ಅಸಮರ್ಪಕ ಜೀವನ ಶೈಲಿಯಿಂದಾಗಿ ನಮ್ಮ ಆರೋಗ್ಯ ಇಂದು ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ವೆನ್‍ಲಾಕ್ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ನಡೆದ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಬಾಯಿಗೆ ಚಪಲಕ್ಕೆ ತಕ್ಕಂತೆ ಆಹಾರ ಸೇವನೆ ಹಾಗೂ ಅಸುರಕ್ಷಿತ ರೀತಿಯಲ್ಲಿ ತಯಾರಿಸಿದ ಆಹಾರಗಳ ಸೇವನೆಯಿಂದ ನಮ್ಮ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುತ್ತದೆ. ಈ ನಿಟ್ಟಿನಲ್ಲಿ ತಲಾತಲಾಂತರಗಳಿಂದ ಅನುಸರಿಸಿಕೊಂಡು ಬಂದಿರುವ ಆಯುರ್ವೇದ ಅಂಶಗಳನ್ನು ಒಳಗೊಂಡ ಆಹಾರವನ್ನು ನಾವು ಬಳಸಬೇಕೆಂದು ಅವರು ತಿಳಿಸಿದರು.
ಮಂಗಳೂರು ಮೇಯರ್ ಮನೋಜ್ ಕುಮಾರ್ ಮಾತನಾಡಿ ಸಾವಿರಾರು ವರ್ಷಗಳ ಇತಿಹಾಸ ಇರುವ ಆಯುರ್ವೇದವು ನಮ್ಮ ಜೀವನದ ದೈನಂದಿನ ಅಂಗವಾಗಿದೆ. ಋಷಿ ಮುನಿಗಳಿಂದ ಇಂದಿನವರೆಗೆ ಆಯುರ್ವೇದದಿಂದ ಉತ್ತಮ ಹಾಗೂ ದೀರ್ಘ ಜೀವನ ಪಡೆಯಲು ಸಹಕಾರಿಯಾಗಿದೆ ಎಂದು ಹೇಳಿದರು.
ಭಾರತೀಯ ಆಯುಷ್ ಫೆಡರೇಶನ್ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಗೋಖಲೆ ಮಾತನಾಡಿ ಆಯುರ್ವೇದದಿಂದ ರೋಗ ನಿಧಾನವಾಗಿ ವಾಸಿಯಾಗುತ್ತದೆ ಎಂಬ ವಾದ ಸರಿಯಲ್ಲ. ಜನರು ರೋಗದಿಂದ ಬಳಲಿ ಬೇರೆ ಪದ್ಧತಿಯ ಔಷಧ ಬಳಸಿ ಕಾಯಿಲೆ ವಾಸಿ ಆಗದಿದ್ದರೆ ಆಯುರ್ವೇದ ಪದ್ಧತಿಯ ಮೊರೆ ಹೋಗುತ್ತಾರೆ. ಇದರಿಂದ ರೋಗ ಬಂದು ದೀರ್ಘಕಾಲವಾಗಿರುವುದರಿಂದ ಔಷಧಿಯು ಪರಿಣಾಮಕಾರಿಯಾಗಲು ಸಾಧ್ಯವಿಲ್ಲ. ಆರಂಭದ ಹಂತದಲ್ಲಿಯೇ ಆಯುರ್ವೇದ ಅನುಸರಿಸುವುದರಿಂದ ಆರೋಗ್ಯದಲ್ಲಿ ಸುಧಾರಣೆ ಸಾಧ್ಯವಿದೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಬರುವ ವಿವಿಧ ಔಷಧಿಗಳ ಮಾಹಿತಿ ಹಾಗೂ ವೈದ್ಯಕೀಯ ಸಲಹೆಗಳನ್ನು ಅನುಸರಿಸುವ ಮೊದಲು ವೈದ್ಯರನ್ನು ಸಂಪರ್ಕಿಸಿ ಸಲಹೆ ಪಡೆಯುವುದು ಉತ್ತಮವಾಗಿದೆ ಎಂದು ಅವರು ಹೇಳಿದರು.
ಎಸ್.ಡಿ.ಎಂ ಆಯುರ್ವೇದ ಕಾಲೇಜು ಪ್ರಾಂಶುಪಾಲರಾದ ಡಾ. ಮಮತಾ ಕೆ.ಪಿ ಅವರು “ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಯೋಗ ಗುರು ಗೋಪಾಲಕೃಷ್ಣ ದೇಲಂಪಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಬಿ.ಎ. ಖಾದರ್ ಶಾ, ಆಯುಶ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಝಾಹೀದ್, ಡಾ. ಗೋಪಾಲಕೃಷ್ಣ ನಾಯಕ್, ಡಾ. ನೂರುಲ್ಲಾ, ಡಾ. ಸಹನಾ ಪಾಂಡುರಂಗ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆಯುಶ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್, ಸ್ವಾಗತಿಸಿದರು. ಶೋಭಾ ರಾಣಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು