7:57 AM Thursday5 - December 2024
ಬ್ರೇಕಿಂಗ್ ನ್ಯೂಸ್
ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ… ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವಕ್ಕೆ 3 ದಶಕಗಳ ಮೆರುಗು: ಡಿ.10ರಿಂದ 15ರ ವರೆಗೆ ಆಳ್ವಾಸ್… ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 5 ಮಂದಿ ವೈದ್ಯಕೀಯ ವಿದ್ಯಾರ್ಥಿಗಳ ದಾರುಣ ಸಾವು ಫೆಂಗಲ್ ಎಫೆಕ್ಟ್: ಬೆಂಗಳೂರಿನಲ್ಲಿ ಸಾಧಾರಣ ಮಳೆ; ಎಂದಿನಂತೆ ತೆರೆದುಕೊಂಡ ಶಾಲಾ- ಕಾಲೇಜು ಕೂಡ್ಲಿಗಿ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರ ಬಂಧನ; ಸಾಮಗ್ರಿ ಜಪ್ತಿ ಮಲೆನಾಡಲ್ಲಿ ಫೆಂಗಲ್ ಅಬ್ಬರ: ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ; ಕಾಫಿ ಬೆಳೆಗಾರರು ಕಂಗಾಲು ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರಗೆ ಮುಖ್ಯಮಂತ್ರಿ ಮೆಚ್ಚುಗೆ ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ… ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ…

ಇತ್ತೀಚಿನ ಸುದ್ದಿ

ರಾಜ್ಯಕ್ಕೆ ಕೇಂದ್ರದಿಂದ ಆರ್ಥಿಕ ಅನ್ಯಾಯ: ರಾಜ್ಯೋತ್ಸವ ಸಮಾರಂಭದಲ್ಲಿ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ

01/11/2024, 18:01

ಮಂಗಳೂರು(reporterkarnataka.com): ನಮ್ಮ ರಾಜ್ಯ ಅತ್ಯಧಿಕ ಜಿಎಸ್‌ಟಿ ಸಂಗ್ರಹಿಸುವ ರಾಜ್ಯವಾಗಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಾದ ಪಾಲು ಸಿಗದ ಕಾರಣ ರಾಜ್ಯ ತೀವ್ರ ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು.


ನಗರದ ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಸಂದೇಶ ನೀಡಿ ಮಾತನಾಡಿದರು.
ಜಿಎಸ್‌ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯವು ದೇಶದಲ್ಲೇ 2ನೇ ಸ್ಥಾನದಲ್ಲಿದ್ದರೂ, ಹಣಕಾಸು ಆಯೋಗದಿಂದ ಸಿಗಬೇಕಾದ ಹಣದಲ್ಲಿ ತೀವ್ರವಾದ ಕಡಿತವಾಗಿದೆ. ನಮ್ಮ ರಾಜ್ಯದಲ್ಲಿ ತೆರಿಗೆಯನ್ನು ರಾಜ್ಯಕ್ಕೆ ಅನುಕೂಲಕ್ಕೆ ತಕ್ಕಂತೆ ವಿಧಿಸುವ ಅಧಿಕಾರ ಜಿಎಸ್‌ಟಿಯಿಂದ ಇಲ್ಲವಾಗಿದೆ. ಇದಕ್ಕೆ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣವೂ ಸಿಕ್ಕಿಲ್ಲ. ಇಂತಹ ಪರಿಸ್ಥಿತಿ ಯಾವ ರಾಜ್ಯಕ್ಕೂ ಬರಬಾರದು. ಕರ್ನಾಟಕ ರಾಜ್ಯೋತ್ಸವದ ಈ ದಿನದಂದು ಇದನ್ನು ನೆನಪಿಸಬೇಕಿದೆ. ನಮ್ಮ ಶ್ರಮದ ಪಾಲನ್ನು ಯಾರೋ ಅನ್ಯಾಯವಾಗಿ ಕಸಿದುಕೊಳ್ಳುತ್ತಿದ್ದಾರೆಂಬ ಭಾವನೆ ರಾಜ್ಯಗಳಿಗೆ ಬರಬಾರದು. ಕರ್ನಾಟಕ ಸರಕಾರ ಇದನ್ನು ಪ್ರಶ್ನಿಸಿದೆ. ರಾಜ್ಯದ ಹಿತಾಸಕ್ತಿ ಪರವಾಗಿ ಗಟ್ಟಿಯಾಗಿ ನಿಂತಿದೆ ಎಂದವರು ಹೇಳಿದರು.
ರಾಜ್ಯವನ್ನು ಸಮೃದ್ಧ ಕರ್ನಾಟಕ ಮಾಡುವುದೇ ಸರಕಾರದ ಗುರಿಯಾಗಿದ್ದು, ಅನೇಕ ಜನಪರ, ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಏಕೀಕೃತ ಕರ್ನಾಟಕ ರಾಜ್ಯ ಉದವಾದಾಗಿನಿಂದಲೂ ಕೇಳಿಬರುತ್ತಿದ್ದ ಪ್ರಾದೇಶಿಕ ಅಸಮತೋಲನದ ಕೂಗನ್ನು ನಿವಾರಿಸಲು ರಾಜ್ಯ ಸರಕಾರ ಶ್ರಮಿಸುತ್ತಿದ್ದು, ಇತ್ತೀಚೆಗೆ ಗುಲ್ಬರ್ಗಾದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಸೇರಿ ಆ ಭಾಗದ ಪ್ರಗತಿಗೆ ಅನೇಕ ಯೋಜನೆಗಳನ್ನು ಮತ್ತು ಮಹತ್ವದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲು ದಿಟ್ಟ ಹೆಜ್ಜೆ ಇಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.




ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಬಳಿಕ ನೆಹರೂ ಮೈದಾನದಲ್ಲಿ ವಿವಿಧ ಶಾಲೆಗಳ ಮಕ್ಕಳ ತಂಡದಿಂದ ರಾಜ್ಯೋತ್ಸವಕ್ಕೆ ಸಂಬಂಧಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು.



ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಐವನ್ ಡಿಸೋಜ, ಮೇಯರ್ ಮನೋಜ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಡಿಐಜಿ ಅಮಿತ್ ಸಿಂಗ್, ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಎಸ್ಪಿ ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಗೇರು ನಿಗಮ ಅಧ್ಯಕ್ಷೆ ಮಮತ ಗಟ್ಟಿ,
ಕಾರ್ಪೋರೇಟರ್ ಟಿ.ಪ್ರವೀಣ್ ಚಂದ್ರ ಆಳ್ವ, ಎ.ಸಿ. ವಿನಯರಾಜ್, ನವೀನ್ ಡಿಸೋಜಾ, ಶಾಹುಲ್ ಹಮೀದ್, ಎಂ.ಪಿ. ಶ್ರೀನಾಥ್, ಸದಾಶಿವ ಉಳ್ಳಾಲ್, ಪ್ರದೀಪ್ ಕುಮಾರ್ ಕಲ್ಕೂರ, ಉಮರ್ ಯು.ಎಚ್., ಸ್ಟಾನಿ ಅಲ್ವಾರಿಸ್, ದೇವಿಪ್ರಸಾದ್ ಶೆಟ್ಟಿ, ಡಾ. ಶಿವಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು