1:43 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ಮಹಿಳೆಯರಿಗೆ ಪರಿಕರಗಳ ವಿತರಿಸಿದ ತಹಶೀಲ್ದಾರ್

01/11/2024, 23:41

ಮೋಹನ್ ನಂಜನಗೂಡು ಮೈಸೂರು

info.reporterkarnataka.com

ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಶ್ರೀ ಗುರುಮಲ್ಲೇಶ್ವರ ದಾಸೋಹ ಮಠದ ಸಭಾಂಗಣದಲ್ಲಿ ಐಟಿಸಿ ಮತ್ತು ಬಂಧನ್ ಕೊನ್ನಗರ್ ಟಿಎಚ್ ಪಿ ವತಿಯಿಂದ ಆಯೋಜಿಸಿದ್ದ ಮಹಿಳೆಯರಿಗೆ ಉಚಿತ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ತಹಶೀಲ್ದಾರ್ ಗ್ರೇಡ್ 2 ಮಹೇಶ್ ಪಾಟೀಲ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ವಾಸಿಸುವ ಜನರಿಗೆ ಉದ್ಯೋಗವಕಾಶಗಳನ್ನು ನೀಡಬೇಕು ಹಾಗಾಗಿ
ಐಟಿಸಿ ಮತ್ತು ಬಂಧನ್ ಕೊನ್ನಗರ್ ಸಂಸ್ಥೆಯವರು ಬಡತನದಲ್ಲಿರುವ ಮಹಿಳೆಯರನ್ನು ಗುರುತಿಸಿ ಅವರಿಗೆ ಸ್ವಾವಲಂಬಿ ಜೀವನವನ್ನು ನಡೆಸಲು ಟೈಲರಿಂಗ್ ತರಬೇತಿಯನ್ನು ನೀಡಿ, ಹೊಲಿಗೆ ಯಂತ್ರ, ತಳ್ಳುವ ಗಾಡಿ, ದಿನಸಿ ಅಂಗಡಿಗೆ ಬೇಕಾದ ದವಸ ಧಾನ್ಯಗಳ ವಸ್ತುಗಳು, ಪಾತ್ರೆ ಅಂಗಡಿಗೆ ಬೇಕಾದ ಪಾತ್ರೆಗಳ ಸಾಮಗ್ರಿಗಳು ಸೇರಿದಂತೆ ವಿವಿಧ ಬಗೆಯ ಪರಿಕರಗಳನ್ನು ಮಹಿಳೆಯರಿಗೆ ನೀಡಿ ಅವರ ಬದುಕಿಗೆ ಆಶ್ರಯವಾಗುತ್ತಿದ್ದಾರೆ. ಮಹಿಳೆಯರು ಇದರ ಸದುಪಯೋಗವನ್ನು ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಬೇಕು. ನೀವು ಕಲಿತ ಕೆಲಸವನ್ನು ಇನ್ನೊಬ್ಬರಿಗೆ ಹೇಳಿಕೊಂಡು ಅವರಿಗೂ ಆಶ್ರಯ ನೀಡಬೇಕು ಎಂದು ತಿಳಿಸಿದರು.
ಸುಮಾರು 50ಕ್ಕೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ರೆಡಿಮೇಡ್ ಉಡುಪುಗಳು, ಸೌಂದರ್ಯ ವರ್ಧಕಗಳು, ದಿನಸಿ ವಸ್ತುಗಳು, ಬ್ಯಾಗ್ ಮೇಕಿಂಗ್, ಪಾಸ್ಟ್ ಫುಡ್, ತಳ್ಳುವ ಗಾಡಿ, ಪಾತ್ರೆ ಸೇರಿದಂತೆ ವಿವಿಧ ಪರಿಕರಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಐಟಿಸಿ ಸಂಸ್ಥೆಯ ಮುಖ್ಯಸ್ಥರಾದ ವಿಜಯ್ ಸಿಂಗ್, ಕಾರ್ಯನಿರ್ವಾಹಕ ಅಧಿಕಾರಿ ಮಂಜು, ಹಿರಿಯ ಮೇಲ್ವಿಚಾರಕರಾದ ಮನೋಜ್, ಹದಿನಾರು ಗ್ರಾಪಂ ಅಧ್ಯಕ್ಷೆ ಸಣ್ಣತಾಯಮ್ಮ, ಬಿಳಿಗೆರೆ ಗ್ರಾ.ಪಂ ಅಧ್ಯಕ್ಷೆ ರಾಜಮ್ಮ, ಕೆಂಪಿಸಿದ್ದನಹುಂಡಿ ಗ್ರಾಪಂ ಉಪಾಧ್ಯಕ್ಷೆ ಲಕ್ಷ್ಮಮ್ಮ, ಮುಖಂಡ ಪುನೀತ್ ಕುಮಾರ್, ಬಂಧನ್ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ದೀಪಕ್ ದಾಸ್, ಸಮುದಾಯ ಅಧಿಕಾರಿ ಮಂಜುನಾಥ್, ಸಂಯೋಜಕ ಮುಸ್ತಕಿನ್ ಸೇರಿದಂತೆ ಮಹಿಳೆಯರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು