3:37 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಪಾಣೆಮಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಆಚರಣೆ

01/11/2024, 23:48

ಬಂಟ್ವಾಳ(reporterkarnataka.com):ಪಾಣೆಮಂಗಳೂರು ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಎನ್. ನರೇಂದ್ರನಾಥ ಕುಡ್ವಾ ಅವರು ರಾಷ್ಟ್ರಧ್ವಜಕ್ಕೆ ಧ್ವಜಾರೋಹಣವನ್ನು ನೆರವೇರಿಸಿ, ಶಾಲಾ ಸಂಚಾಲಕರು ಮುಖ್ಯ ಅತಿಥಿಗಳು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳೊಡಗೂಡಿ ರಾಷ್ಟ್ರಗೀತೆಯನ್ನು ಹಾಡಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು.


ನಂತರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಕ್ಷಾ ಮತ್ತು ಬಳಗದವರು ನಾಡಗೀತೆಯನ್ನು ಹಾಡುವುದರ ಮೂಲಕ ಪ್ರಾರ್ಥನೆಯನ್ನು ಮಾಡಿ, ವಿದ್ಯಾರ್ಥಿಗಳೇ ರಚಿಸಿದ ಕರ್ನಾಟಕ ಭೂಪಟಕ್ಕೆ ಸಾಂಕೇತಿಕವಾಗಿ 69 ದೀಪಗಳನ್ನು ಹಚ್ಚುವುದರ ಮೂಲಕ ಆಡಳಿತ ಮಂಡಳಿಯ ಅಧ್ಯಕ್ಷರು, ಶಾಲಾ ಸಂಚಾಲಕರು, ಮುಖ್ಯ ಅತಿಥಿಗಳು, ಶಿಕ್ಷಕರು, ಶಿಕ್ಷಕೇತರರು ಮತ್ತು ವಿದ್ಯಾರ್ಥಿಗಳೊಡಗೂಡಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಯಾನಂದ ಪೆರಾಜೆ ಅವರು ಕನ್ನಡ ನಾಡು, ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕನ್ನಡ ಹಿರಿಮೆ ಗರಿಮೆ, ಕನ್ನಡ ಪರಂಪರೆ ಕನ್ನಡವನ್ನು ಕಟ್ಟಿ ಬೆಳೆಸುವಲ್ಲಿ ಕಾರಣಿಭೂತರಾದ ಕನ್ನಡದ ಮಹಾನ್ ಕವಿಗಳು ಹಾಗೂ ನಮ್ಮ ದಕ್ಷಿಣ ಕನ್ನಡದ ಮತ್ತು ಬಂಟ್ವಾಳ ತಾಲೂಕಿನ ಮೇರು ಸಾಹಿತಿಗಳನ್ನು ಕುರಿತಂತೆ ಅವರೆಲ್ಲರ ಸಾಧನೆಯನ್ನು ಪರಿಚಯಿಸುವುದರ ಮೂಲಕ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಅತ್ಯಂತ ಅರ್ಥಪೂರ್ಣವಾಗಿ ಮನವರಿಕೆ ಮಾಡಿಕೊಟ್ಟರು. ಮತ್ತೋರ್ವ ಅತಿಥಿ ಪಾಣೆಮಂಗಳೂರಿನ ಆಶಾಕಾರ್ಯಕರ್ತೆ ಜ್ಯೋತಿಲಕ್ಷ್ಮಿ ಅವರು ಉಪಸ್ಥಿತರಿದ್ದರು. ನಂತರ ಮುಖ್ಯ ಅತಿಥಿಗಳಿಗೆ ಗೌರವಪೂರ್ವಕವಾಗಿ ಶಾಲಾ ಸಂಚಾಲಕರು ಮತ್ತು ಅಧ್ಯಕ್ಷರು ಸನ್ಮಾನಿಸಿ, ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಡಾ. ಪಿ ವಿಶ್ವನಾಥ ನಾಯಕ್ ಮತ್ತು ಮುಖ್ಯೋಪಾಧ್ಯಾಯರಾದ ಶಿವಪ್ಪ ನಾಯ್ಕ ಕನ್ನಡ ರಾಜ್ಯೋತ್ಸವದ ಸಂದೇಶಗಳನ್ನು ತಿಳಿಸಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ನವ್ಯ ಮತ್ತು ಒಳಗದವರು ಹಚ್ಚೇವು ಕನ್ನಡದ ದೀಪ ಹಾಡನ್ನು ಹಾಡಿದರು. ವೇದಿಕೆಯಲ್ಲಿ ನಮ್ಮ ಶಾಲೆಯ ಹಿರಿಯ ಶಿಕ್ಷಕಿ ಹಾಗೂ ಕವಯಿತ್ರಿ ಸುಧಾ ಮತ್ತು ಶಾಲಾ ನಾಯಕ ಮನ್ವಿತ್ ಸಿ ಪೂಜಾರಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಪ್ಪ ನಾಯಕ್ ಸ್ವಾಗತಿಸಿ, ಕನ್ನಡ ಭಾಷಾ ಆಧ್ಯಾಪಕರಾದ ಶ್ರೀ ಧನರಾಜ್ ದೊಡ್ಡನೇರಳೆ ಪ್ರಾಸ್ತಾವಿಕ ಮಾತುಗಳನ್ನಾಡಿ, ಹತ್ತನೇ ತರಗತಿಯ ವಿದ್ಯಾರ್ಥಿನಿ ಶೈಮಾ ಅತಿಥಿಗಳ ಪ್ರಶಸ್ತಿ ಪತ್ರ ವಾಚಿಸಿ, ಖತೀಜತುಲ್ ಸಹಬೀರ ಧನ್ಯವಾದ ಸಮರ್ಪಣೆ ನೀಡಿ, ಅಬ್ದುಲ್ ರಾಝಿಕ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು