7:26 PM Friday18 - July 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು

ಇತ್ತೀಚಿನ ಸುದ್ದಿ

ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ತೆರೆ: 10 ದಿನಗಳಲ್ಲಿ 20 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

03/11/2024, 19:58

ಅನುಷಾ ಪಾಟೀಲ್ ಹೊಳೆನರಸೀಪುರ ಹಾಸನ

info.reporterkarnataka@gmail.com

ಕಳೆದ 10 ದಿನಗಳಿಂದ ನಡೆಯುತ್ತಿರುವ ಹಾಸನದ ಸುಪ್ರಸಿದ್ದ ಹಾಸನಾಂಬೆ ದೇವಿಯ ಉತ್ಸವಕ್ಕೆ ಇಂದು ವಿಧ್ಯುಕ್ತವಾಗಿ ಮಂಗಳ ಹಾಡಲಾಯಿತು. ಹಾಸನಾಂಬೆಯ ದರ್ಶನಕ್ಕೆ ಇಂದು ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡುವ ಮೂಲಕ ತೆರೆ ಎಳೆಯಲಾಯಿತು.
ಹಾಸನಾಂಬೆ ಉತ್ಸವ ಕಳೆದ 10 ದಿನಗಳಿಂದ ನಡೆಯುತ್ತಿದೆ. ಹಾಸನಾಂಬೆಯ ದರ್ಶನಕ್ಕೆ ಇಡೀ ರಾಜ್ಯದ ವಿವಿಧ ಕಡೆಗಳಿಂದ ಭಕ್ತಾಧಿಗಳ ಪ್ರವಾಹ ಹಾಸನಕ್ಕೆ ಕಳೆದ 10 ದಿನಗಳಿಂದ ಪ್ರವಹಿಸುತ್ತಿತ್ತು. ಬೆಂಗಳೂರು ಹಾಗೂ ಹಾಸನದಿಂದ ಕೆಎಸ್ಸಾರ್ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿತ್ತು. ಬೆಂಗಳೂರು ಟು ಹಾಸನ ಪಾಯಿಂಟ್ ಟು ಪಾಯಿಂಟ್ ಅಶ್ವಮೇಧ ಬಸ್ಸಿಗೆ ಸರತಿ ಸಾಲಿನಲ್ಲಿ ಪ್ರಯಾಣಿಕರನ್ನು ಕಳುಹಿಸುವ ವ್ಯವಸ್ಥೆಯನ್ನು ಪೊಲೀಸ್ ಇಲಾಖೆಯ ನೆರವಿನಿಂದ ಕೆಎಸ್ಸಾರ್ಟಿಸಿ ಮಾಡಿದೆ. ಬಸ್ ಏರಿದವರು ಯಾವುದೇ ಕಾರಣಕ್ಕೆ ಕೆಳಗೆ ಇಳಿಯುವಂತಿರಲಿಲ್ಲ. ಈ ಷರತ್ತನ್ನು ಪ್ರಯಾಣಿಕರಿಗೆ ಮುಂಚೆಯೇ ತಿಳಿಸಿ ಬಸ್ ಹತ್ತಿಸಲಾಗುತ್ತಿತ್ತು.
ವೀಕೆಂಡ್ ದಿನಗಳಾದ ಶನಿವಾರ ಮತ್ತು ಭಾನುವಾರ ದೇವಿಯ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಲಕ್ಷಾಂತರ ಭಕ್ತರು ಸರತಿ ಸಾಲಿನಲ್ಲಿ ನಿಂತು ಅಧಿ ದೇವತೆಯ ದರ್ಶನ ಪಡೆದು ಪುನೀತರಾದರು. ಒಂದು ಅಂದಾಜು ಪ್ರಕಾರ 20 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಅಕ್ಟೋಬರ್ 24 ರಿಂದ ಆರಂಭಗೊಂಡಿದ್ದ ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ಅದ್ದೂರಿ ಮತ್ತು ವಿಜೃಂಭಣೆಯಿಂದ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು