8:58 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೇಶದ ಅಭಿವೃದ್ಧಿಗೆ ಉತ್ತಮ ಅಧಿಕಾರಿಗಳ ಆವಶ್ಯಕತೆ ಇದೆ: ರಚನಾ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ

05/11/2024, 11:49

ಮಂಗಳೂರು(reporterkarnataka.com): ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ಅಗತ್ಯವಿದೆ. ಕ್ರೈಸ್ತ ಯುವ ಸಮುದಾಯ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದ
ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅಭಿಪ್ರಾಯಪಟ್ಟಿದ್ದಾರೆ.


ನಗರದ ಕುಲಶೇಖರ ಕೋರ್ಡೆಲ್ ಸಭಾಂಗಣದಲ್ಲಿ ರವಿವಾರ ನಡೆದ ಕೊಂಕಣಿ ಕೆಥೋಲಿಕ್ ಉದ್ಯಮಿಗಳು, ವೃತ್ತಿಪರರು ಮತ್ತು ಕೃಷಿಕರ ಸಂಸ್ಥೆ ‘ರಚನಾ’ದ ಬೆಳ್ಳಿಹಬ್ಬ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಮನೆಗಳ ಹಿರಿಯರಲ್ಲಿ ಅಭದ್ರತೆ ಕಾಡುತ್ತಿರುವುದು ಮಾತ್ರವಲ್ಲದೆ, ಅವರು ವೃದ್ಧಾಶ್ರಮ ಸೇರಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಆರ್ಚ್ ಬಿಷಪ್ ಕಳವಳ ವ್ಯಕ್ತಪಡಿಸಿದರು.
ಮುಖ್ಯ ಅತಿಥಿ ಪುಣೆಯ ಮಿಲಿಟರಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ರಿಯರ್ ಅಡ್ಮಿರಲ್ ನೆಲ್ಸನ್ ಡಿಸೋಜ ಮಾತನಾಡಿ, ರಚನಾ ಸಂಸ್ಥೆ ಉದ್ಯಮದ ಜತೆಗೆ ಉದ್ಯಮಶೀಲತ್ವವನ್ನು ಬೆಳೆಸುವ ವಿಚಾರದಲ್ಲಿ ಸಾಕಷ್ಟು ಕೆಲಸ ಮಾಡುತ್ತಿದ್ದು, ಇದು ಮತ್ತಷ್ಟು ಮುಂದುವರಿಯುವಂತಾಗಬೇಕು ಎಂದರು.
ಮಂಗಳೂರು ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ದಾನ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ವೇಳೆ ಉದ್ಯಮಿಗಳಾದ ಮೈಕಲ್ ಡಿಸೋಜ, ‘ರಚನಾ’ದ ಅಧ್ಯಕ್ಷ ಅಧ್ಯಕ್ಷ ಜಾನ್ ಮೊಂತೆರೊ, ರಚನಾ ಸಂಚಾಲಕಿ ಮಾರ್ಜೊರಿ ಟೆಕ್ಸೇರ, ಕಾರ್ಯದರ್ಶಿ ವಿಜಯ್ ವಿಶ್ವಾಸ್ ಲೋಬೊ, ಕಾರ್ಯಕಾರಿ ಸಮಿತಿ ಸದಸ್ಯ ಜೆ.ಆರ್. ಲೋಬೊ ಉಪಸ್ಥಿತರಿದ್ದರು.
ಈ ಸಂದರ್ಭ 25 ವರ್ಷಗಳ ಸವಿನೆನಪಿಗಾಗಿ ಕೊಂಕಣಿ ಕ್ರೈಸ್ತ ಯುವ ಉದ್ಯಮಿಗಳಿಗೆ ನೆರವಾಗುವ ನಿಟ್ಟಿನಲ್ಲಿ ‘ರಚನಾ ಕೆಥೋಲಿಕ್ ಸೌಹಾರ್ದ ಸಹಕಾರಿ ಸಂಘ’ ಯೋಜನೆಯ ಉದ್ಘಾಟನೆ ನಡೆಯಿತು. ರಚನಾ ಆರಂಭಿಸಲು ಕಾರಣ ಕರ್ತರಾದ ಮಾರಿಟ್ಟೊ ಸಿಕ್ವೇರ ಅವರನ್ನು ಈ ಈ ಸಂದರ್ಭ ಸನ್ಮಾನಿಸಲಾಯಿತು.
ರಚನಾ ಸ್ಥಾಪನೆ ಮತ್ತು ನಡೆದು ಬಂದ ಹಾದಿಯ ಸಾಕ್ಷ್ಯ ಚಿತ್ರ ಪ್ರದರ್ಶನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು