12:16 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಸಂಡೂರಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೆ ಗಣಿ ಸಂಪತ್ತು ಲೂಟಿ: ಕೆ. ಸಿ. ಕೊಂಡಯ್ಯ ಎಚ್ಚರಿಕೆ

05/11/2024, 12:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಲ್ಲಿ ನಡೆಯು ವಿಧಾನ ಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ಕೊಟ್ಟರೇ ದೌರ್ಜನ್ಯ, ದಬ್ಬಾಳಿಕೆ ನಡೆಯುವ ಸಾಧ್ಯತೆ ಇದೆ. ಸಂಡೂರಿನಲ್ಲಿ‌ನ‌ ಭಾವೈಕ್ಯತೆಗೆ ಧಕ್ಕೆಯಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಸಿ. ಕೊಂಡಯ್ಯ ಹೇಳಿದರು.
ಬಳ್ಳಾರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2004-2010 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ‌ನಡೆಸಿದವರು, ಗಣಿ ಸಂಪತ್ತನ್ನು ಲೂಟಿ ಮಾಡಿದವರೆಲ್ಲ ಬಿಜೆಪಿ ಅಭ್ಯರ್ಥಿ ಪರ ನಿಂತು ಪ್ರಚಾರ ಮಾಡುತ್ತಿದ್ದಾರೆ. ಅವರ ಉದ್ದೇಶ ಸಂಡೂರು ಮತ ಕ್ಷೇತ್ರ ‌ಅಭಿವೃದ್ದಿ‌‌ ಮಾಡುವುದಾಗಿಲ್ಲ. ಅಲ್ಲಿನ ಅದಿರು ಸಂಪತ್ತು, ಮ್ಯಾಂಗನೀಸ್ ನ್ನು ಲೂಟಿ‌ ಮಾಡುವುದಾಗಿದೆ ಎಂದು ಆರೋಪಿಸಿದರು.
ಮತ್ತೊಮ್ಮೆ ಗಣಿ‌ಗಾರಿಕೆ ಮೂಲಕ ಇಲ್ಲಿನ ಸಂಪತ್ತು ಲೂಟಿಗೆ ಸಂಡೂರಿನ ಜನ ಅವಕಾಶ ಮಾಡಿಕೊಡ ಬಾರದು. ಸಂಡೂರಿನವರೇ ಆದ ಇ.ತುಕಾರಂ ‌ಪತ್ನಿ ಅನ್ನಪೂರ್ಣ ಅವರನ್ನೇ ಗೆಲ್ಲಿಸುವ ಮೂಲಕ ಸಂಡೂರಿನ ಅಭಿವೃದ್ದಿಗೆ ಬೆಂಬಲ‌ ಕೊಡಿ ಎಂದು ಮತದಾರರಲ್ಲಿ ಮನವಿ‌ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಂಪ್ರಸಾದ್, ವೆಂಕಟೇಶ್ ಹೆಗಡೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು