10:18 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ ಮಂಗಳೂರು ಕಂಬಳ: ಕಡಲನಗರಿಯಲ್ಲಿ ಪೂರ್ವಭಾವಿ ಸಭೆ

05/11/2024, 20:33

ಮಂಗಳೂರು(reporterkarnataka.com): ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ನಡೆಯಲಿರುವ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು.
ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರೂ ಆದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ನಂತರ ಮಾತನಾಡಿದ ಸಂಸದರು, ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತ್ತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ ಎಂದರು.
ಕರಾವಳಿಯ ಜನಪದ ಕ್ರೀಡೆಯಾದ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಕೆಲಸವನ್ನು ಯುವಕರು ಮಾಡಬೇಕು.
ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ನುಡಿದರು.
ಜಿಲ್ಲಾ ಕಂಬಳ ಸಮಿತಿಯ ವಿಜಯ ಕುಮಾರ್ ಕಂಗಿನಮನೆ ಮಾತನಾಡಿ, ಮಂಗಳೂರಿನಲ್ಲಿ ನಡೆಯುವ ಕಂಬಳ ಜನ ಆಕರ್ಷಣೀಯ ಕೇಂದ್ರವಾಗುತ್ತಿದ್ದು, ಕಂಬಳಕ್ಕೆ ಇನ್ನಷ್ಟು ಮೆರೆಗು ನೀಡುವ ನಿಟ್ಟಿನಲ್ಲಿ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಸರ್ವ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.
ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಅವರು ಕಂಬಳ ಈ ಮಣ್ಣಿನ ಅಸ್ಮಿತೆ, ಅದನ್ನು ಮುಂದುವರಿಸಿಕೊಂಡು ಹೋಗಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ಮಂಗಳೂರು ಕಂಬಳ ಮೇಲ್ಪಂಕ್ತಿಯಾಗಿದೆ ಎಂದರು.


ಸಭೆಯಲ್ಲಿ ಜಿಲ್ಲಾ ಕಂಬಳ ಸಮಿತಿಯ ಪಿ.ಆರ್. ಶೆಟ್ಟಿ, ಸುಧಾಕರ ಶೆಟ್ಟಿ ಮುಗರೋಡಿ,ಕಂಬಳ ಸಮಿತಿ ಉಪಾಧ್ಯಕ್ಷರಾದ ಕಿರಣ್ ಕುಮಾರ್,ಅನಿಲ್ ಕುಮಾರ್, ಮಂಗಳೂರು ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಕಂಬಳ ಸಮಿತಿಯ ಕೋಶಾಧಿಕಾರಿ ಪ್ರೀತಮ್ ರೈ ಉಪಸ್ಥಿತರಿದ್ದರು. ಸಂಚಾಲಕ ಸಚಿನ್ ಶೆಟ್ಟಿ ಸಾಂತ್ಯ ಸ್ವಾಗತಿಸಿದರು.
ಉಪಾಧ್ಯಕ್ಷ ಪ್ರಕಾಶ್ ಪೂಜಾರಿ ಗರೋಡಿ ವಂದಿಸಿದರು, ಕಾರ್ಯದರ್ಶಿ ಮನ್ಮತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು