2:45 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್ 3: ಕಡಲನಗರಿ ಮಂಗಳೂರಿನಲ್ಲಿ ಜನವರಿ 15ರಿಂದ ಆರಂಭ; ಮಕ್ಕಳಿಗಾಗಿ ವಿವಿಧ ವಿನೋದಾವಳಿ

06/11/2024, 19:10

ಮಂಗಳೂರು(reporterkarnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಬಹು ನಿರೀಕ್ಷಿತ ಮೂರನೇ ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾ 2025 ರ ಜನವರಿ 15ರಿಂದ 19 ರವರೆಗೆ 5 ದಿನಗಳ ಕಾಲ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ನಗರದ ವಿ.ಟಿ ರಸ್ತೆಯ ಚೇತನ ಶಿಶು ಅಭಿವೃದ್ಧಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಕಳೆದೆರಡು ಆವೃತ್ತಿಯ ಸ್ಟ್ರೀಟ್ ಫುಡ್ ಫಿಯೆಸ್ಟಾವು ಯಶಸ್ವಿಯಾಗಿ ಸಾಗಿದ್ದು ಲಕ್ಷಾಂತರ ಜನರನ್ನು ಆಕರ್ಷಿಸಿ ಜಿಲ್ಲೆಯ ಪ್ರವಾಸೋದ್ಯಮವನ್ನು ಉತ್ತೇಜಿಸಿತ್ತು. ಅದರಂತೆ ಈ ಬಾರಿಯೂ ಹಿಂದಿನ ಆವೃತ್ತಿಗಳಂತೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಪಬ್ಬಾಸ್, ಮಣ್ಣಗುಡ್ಡ, ಕೆನರಾ ಹೈಸ್ಕೂಲ್ ಉರ್ವದ ಸುತ್ತಮುತ್ತ ಸಂಜೆ 4 ರಿಂದ ರಾತ್ರಿ 11ರ ವರೆಗೆ ಫುಡ್ ಫಿಯೆಸ್ಟಾ ಆಯೋಜಿಸಲಾಗಿದ್ದು, ಸಾರ್ವಜನಿಕರಿಗಾಗಿ ವಿವಿಧ ಮನೋರಂಜನಾ ಕಾರ್ಯಕ್ರಮಗಳೂ ನಡೆಯಲಿವೆ. ಬಹು ಬೇಡಿಕೆಯನುಸಾರ ಈ ಬಾರಿ ಸಸ್ಯಾಹಾರಿಗಳಿಗೆಂದೇ ಪ್ರತ್ಯೇಕ ವ್ಯವಸ್ಥೆಯನ್ನು ಸಹ ಮಾಡಲಾಗುವುದಾಗಿದ್ದು ಮಕ್ಕಳಿಗಾಗಿ ವಿಶೇಷ ವಿನೋದಾವಳಿಗಳನ್ನು ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿಷ್ಠಾನದ ಮಾರ್ಗದರ್ಶಕರಾದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಅತ್ಯಂತ ಯಶಸ್ವಿಯಾಗಿ ಸಮಾಪ್ತಿಗೊಂಡ ಕಳೆದೆರಡು ಬಾರಿಯ ಫುಡ್ ಫೆಸ್ಟ್ ನಿಂದ ಉತ್ತೇಜನಗೊಂಡು ಸುರತ್ಕಲ್, ಮೂಡಬಿದ್ರಿ ಸೇರಿದಂತೆ ಅನೇಕ ಕಡೆಗಳಲ್ಲಿ ಇದೇ ರೀತಿಯ ಕಾರ್ಯಕ್ರಮಗಳು ನಡೆದಿವೆ. ಇದು ಎಲ್ಲೆಡೆ ಆಹಾರ ಸಂಸ್ಕೃತಿಯ ವಿನಿಮಯಕ್ಕೆ ದಾರಿಯಾಗಲಿದ್ದು ಈ ಬಾರಿಯ ಸ್ಟ್ರೀಟ್ ಫುಡ್ ಫಿಯೆಸ್ಟ ಈ ಹಿಂದಿಗಿಂತಲೂ ಹೆಚ್ಚಿನ ಜನರನ್ನು ಆಕರ್ಷಿಸಿ ಯಶಸ್ವಿಯಾಗಲಿ ಎಂದು ಹಾರೈಸಿದರು.


ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಗಿರಿಧರ್ ಶೆಟ್ಟಿ, ಅಧ್ಯಕ್ಷರಾದ ದಿವಾಕರ್ ಪಾಂಡೇಶ್ವರ್, ನರೇಶ್ ಶೆಣೈ, ಲಲಿತ್ ಮೆಂಡನ್, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು