7:04 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ನಂಜನಗೂಡು: ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿ ರೈತರಿಂದ ಬೃಹತ್ ಪ್ರತಿಭಟನೆ

06/11/2024, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರೈತರ ಜೀವನಾಡಿಯಾದ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ಸರ್ವೆ ನಂಬರ್ 517ರಲ್ಲಿರುವ 19 ಎಕರೆ ಪ್ರದೇಶದ ಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಕೆರೆಯ ಅಂಗಳದಲ್ಲಿಯೇ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರು ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಈ ಕೆರೆ ತುಂಬಿದರೆ ಹೆಡತಲೆ, ಹೆಮ್ಮರಗಾಲ, ಕುಂಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸೇರಿದಂತೆ ಅಂತರ್ಜಲ ಹೆಚ್ಚಾಗಿ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ .ಸ್ವಾತಂತ್ರ್ಯ ಬಂದು 80 ವರ್ಷಗಳೇ ಕಳೆದರೂ ಇನ್ನೂ ನಾವು ನೀರಿಗಾಗಿ ಬಿಕ್ಷೆ ಬೇಡುವಂತಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು ನೂರಾರು ಟಿಎಂಸಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ಆದರೆ ನಮ್ಮ ರೈತರಿಗೆ ಕೇವಲ ಅಲ್ಪಸ್ವಲ್ಪ ನೀರು ಬಿಡಲು ನಮ್ಮನ್ನಾಳುವ ಸರ್ಕಾರಗಳು ಹಾಗೂ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಈ ಭಾಗದ ರೈತರ ಅನುಕೂಲಕ್ಕಾಗಿ ಈ ಕೆರೆಗೆ ನೀರು ತುಂಬಿಸುವವರೆಗೂ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಸೋಮಣ್ಣ ಮಾತನಾಡಿ, ಈಗಾಗಲೇ ದೇವನೂರು ಏತ ನೀರಾವರಿ ಮೂಲಕ ಈ ಕೆರೆಯೂ ಸೇರಿದಂತೆ ಬೇರೆಬೇರೆ ಕೆರೆ ತುಂಬಿಸುವ ಯೋಜನೆಗಾಗಿ ಸುಮಾರು 9೦ ಕೋಟಿ ರೂಪಾಯಿ ಅನುದಾನ ನೀಡಿದ್ದು ಟೆಂಡರ್ ಸಹ ಕರೆಯಲಾಗಿದೆ ಟೆಂಡರ್ ಗೆ ಸಂಬಂಧಿಸಿದಂತೆ ಗುತ್ತಿಗೆದಾರರೊಬ್ಬರು ಕೋರ್ಟ್ ಮೊರೆ ಹೋಗಿರುವುದರಿಂದ ಕಾಮಗಾರಿ ಸ್ವಲ್ಪ ತಡವಾಗಿದೆ. ನವೆಂಬರ್ 13ರಂದು ಕೇಸ್ ಇರುವುದರಿಂದ ಅದು ಮುಗಿದ ತಕ್ಷಣ ಕಾಮಗಾರಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.
ಇದಕ್ಕೂ ಮುನ್ನ ಹೆಡತಲೆ, ಹೆಮ್ಮರಗಾಲ ಹಾಗೂ ಕುಂಬರಹಳ್ಳಿ ಗ್ರಾಮದ ರೈತರು ಕಾಲ್ನಡಿಗೆ ಮೂಲಕ ಮೆರವಣಿಗೆ ಬಂದು ಕೆರೆಯ ಬಳಿ ಜಮಾವಣೆಗೊಂಡರು
ಬಂದ ಎಲ್ಲಾ ರೈತರಿಗೆ ಸ್ಥಳದಲ್ಲೇ ಅಡುಗೆ ತಯಾರು ಮಾಡಲಾಗುತ್ತಿತ್ತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರು, ನೀರಾವರಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಮಹೇಶ್, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹಿಮ್ಮಾವು ರಘು ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಸೇರಿದಂತೆ ರೈತ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು