10:09 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಐತಿಹಾಸಿಕ ಎಡನೀರು ಮಠ ಹಾಗೂ ಸ್ವಾಮೀಜಿಗೆ ರಕ್ಷಣೆ ನೀಡಿ: ಕೈಯೂರು ನಾರಾಯಣ ಭಟ್ ಆಗ್ರಹ

07/11/2024, 10:32

ಬಂಟ್ವಾಳ(reporterkarnataka.com): ಸುಮಾರು ೧೩೦೦ ವರ್ಷಗಳ ಇತಿಹಾಸವಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಕಾರಿಗೆ ದುಷ್ಕರ್ಮಿಗಳು ತಡೆಯೊಡ್ಡಿ ಅಡ್ಡಿಪಡಿಸಿದ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಬಿ.ಸಿ. ರೋಡ್ ನ ಪತ್ರಿಕಾ ಭವನದಲ್ಲಿ ಶ್ರೀ ಕ್ಷೇತ್ರ ಎಡನೀರು ಮಠದ ಭಕ್ತಾಭಿಮಾನಿಗಳ ಬಳಗ ಬಂಟ್ವಾಳ ಇವರು ಏರ್ಪಡಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಸರಗೋಡು ಎಡನೀರು ಮಠವು ತನ್ನದೇ ಆದ ವಿಶಿಷ್ಠ ಪರಂಪರೆ ಹೊಂದಿದ್ದು ಎಲ್ಲಾ ಜಾತಿ,ಮತ,ಸಂಪ್ರದಾಯಗಳನ್ನು ಗೌರವಿಸುವ ಹಿನ್ನೆಲೆ ಹೊಂದಿದೆ. ಮುಖ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಸ್ವಾಮೀಜಿಯವರು ತೆರಳುತ್ತಿರುವುದನ್ನು ಕಂಡು ದುರುದ್ದೇಶ ಪೂರ್ವಕವಾಗಿ ‌ ಆಕ್ರಮಣಕಾರಿ ರೀತಿಯಲ್ಲಿ ಕಾರಿಗೆ ಹಾನಿಗೊಳಿಸಿ ಬೆದರಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು.
ಈ ಮಠಕ್ಕೆ ಮುಸಲ್ಮಾನರು ಸಹಿತ ದೇಶದ ವಿವಿಧೆಡೆ ಭಕ್ತರಿದ್ದು ಇಲ್ಲಿನ ಉತ್ಸವಾದಿಗಳಿಗೆ ದೇಣಿಗೆ ಹೊರೆಕಾಣಿಕೆ ಸಮರ್ಪಿಸುತ್ತಿದ್ದಾರೆ. ಲಕ್ಷಾಂತರ ಮಠದ ಅಭಿಮಾನಿಗಳಿಗೆ ಈ ಘಟನೆಯಿಂದ ಖೇದವಾಗಿದೆ ಎಂದು‌ ತಿಳಿಸಿದರು.

ಕನ್ನಡ ಭಾಷಾ ಸಾಹಿತ್ಯ,ಯಕ್ಷಗಾನ ಹಾಗೂ ವಿವಿಧ ಕಲೆಗಳಿಗೆ ಪ್ರೋತ್ಸಾಹ ನೀಡುತ್ತಿರುವ ಶ್ರೀಗಳಿಗೆ ಮತ್ತು ಮಠಕ್ಕೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು‌ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರತಿಷ್ಠಾನದ ಕೋಶಾಧಿಕಾರಿ ಅನಾರು ಕೃಷ್ಣ ಶರ್ಮ, ಜಿಲ್ಲಾ ಪ್ರತಿನಿಧಿ ರಾಜಮಣಿ ರಾಮ ಕುಂಜ, ಬಂಟ್ವಾಳ ತಾಲೂಕು‌ ಅಧ್ಯಕ್ಷ ಸುಬ್ರಾಯ ಮಡಿವಾಳ, ಕಾರ್ಯದರ್ಶಿ ಕೋಕಳ ರಾಮಕೃಷ್ಣ ನಾಯಕ್ ಹಾಗೂ ಡಾ.ಮಹಾಲಿಂಗ ಭಟ್, ನ್ಯಾಯವಾದಿ ರವೀಂದ್ರ ಕುಕ್ಕಾಜೆ, ಶೇಖರ ಮಂಚಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು