ಇತ್ತೀಚಿನ ಸುದ್ದಿ
ಗುರುಪುರ ಅಡ್ಡೂರು: ಅಕ್ರಮ ಮರಳುಗಾರಿಕೆಗೆ ನೀರಿನಲ್ಲಿ ಮುಳುಗಿಸಿಟ್ಟ 7 ದೋಣಿಗಳ ಪತ್ತೆ
07/11/2024, 20:12
ಮಂಗಳೂರು(reporterkarnataka.com): ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿ ನೀರಿನಲ್ಲಿ ಮುಳುಗಿಸಿಟ್ಟಿದ್ದ ದೋಣಿಗಳನ್ನು ವಶಪಡಿಸಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಅಡ್ಡೂರು ಸಮೀಪ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 9 ದೋಣಿಗಳನ್ನು ವಶಪಡಿಸಲಾಯಿತು. ಇದಲ್ಲದೆ, ಅಕ್ರಮ ಮರಳುಗಾರಿಕೆ ನಡೆಸಲು ಉಪಯೋಗಿಸುತ್ತಿದ್ದ 7 ದೋಣಿಗಳನ್ನು ನೀರಿನ ಅಡಿಯಲ್ಲಿ ಮುಳುಗಿಸಿಟ್ಟಿರುವುದು ದಾಳಿ ಸಂದರ್ಭದಲ್ಲಿ ಪತ್ತೆಯಾಗಿದೆ.
ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.