7:24 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಫ್ಲೈಯಿಂಗ್ ಸ್ಕ್ಯಾಡ್ ಕಾರ್ಯಾಚರಣೆ: ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ

07/11/2024, 20:31

ಮಂಗಳೂರು(reporterkarnataka.com): ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಸೂಚಿಸಿದ್ದಾರೆ.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್ ಸ್ಕ್ಯಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ತಪಾಸಣಾ ತಂಡಗಳು ಮುತುವರ್ಜಿಯಿಂದ ಕೆಲಸ ಮಾಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಫ್ಲೈಯಿಂಗ್ ಸ್ಕ್ಯಾಡ್ ಸಭೆ ನಡೆಯಬೇಕು. ಇಲ್ಲಿಯವರೆಗೂ ನಡೆದ ಪ್ರಕರಣಗಳ ಬಗ್ಗೆ ಜರುಗಿಸಿದ ಕ್ರಮದ ಬಗ್ಗೆ ಮಾಹಿತಿಯನ್ನು ಒದಗಿಸಬೇಕು ಎಂದು ಅವರು ತಿಳಿಸಿದರು.
ಆನ್‍ಲೈನ್ ಆ್ಯಪ್‍ಗಳನ್ನು ನಂಬಿ ಸಾರ್ವಜನಿಕರು ಹಣವನ್ನು ಹೂಡಿಕೆ ಮಾಡಿ ವಂಚನೆಗೆ ಒಳಗಾಗುವ ಪ್ರಕರಣಗಳು ಅತಿಯಾಗಿ ನಡೆಯುತ್ತಿದ್ದು ಇಂತಹ ವಂಚನೆಗಳಿಗೆ ಸಾರ್ವಜನಿಕರು ಬಲಿಪಶುಗಳಾಗಬಾರದು. ಸೈಬರ್ ವಂಚನೆ ಅಥವಾ ಇನ್ನು ಅನಧಿಕೃತ ಪ್ರಕರಣಗಳು ಕಂಡು ಬಂದಲ್ಲಿ ಸಾರ್ವಜನಿಕರು ಯಾವುದೇ ಹಿಂಜರಿಕೆ ಇಲ್ಲದೆ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬೇಕು ಎಂದರು.
ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಹಣದ ಆಮಿಷಕ್ಕಾಗಿ ಆನ್‍ಲೈನ್ ಮೂಲಕ ತಮ್ಮ ಹಣವನ್ನು ಹೂಡಿಕೆ ಮಾಡಿ ವಂಚನೆಗೊಳಗಾಗುವ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಾರ್ವಜನಿಕರು ಯಾವುದೇ ನಕಲಿ ಜಾಲತಾಣಗಳನ್ನು ನಂಬಿ ಹಣವನ್ನು ಹೂಡಿಕೆ ಮಾಡಬಾರದು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹಣವನ್ನು ಹೂಡಿಕೆ ಮಾಡುವಂತೆ ಜಾಗೃತಿ ಮೂಡಿಸಲು ಹೆಚ್ಚುವರಿ ಜಿಲ್ಲಾಧಿಕಾರಿಗಳು ಸೂಚಿಸಿದರು.
ಆನ್‍ಲೈನ್ ವಂಚನೆ ಪ್ರಕರಣಗಳು ಕಂಡು ಬಂದಲ್ಲಿ ಪೊಲೀಸ್ ಇಲಾಖೆಯು ಶೀಘ್ರವಾಗಿ ಕ್ರಮ ಜರುಗಿಸಬೇಕು ಎಂದರು.
ಕರ್ನಾಟಕ ಸರಕಾರವು ಈಗಾಗಲೇ ಲಾಟರಿಗಳನ್ನು ರಾಜ್ಯದಲ್ಲಿ ನಿಷೇಧಿಸಿದ್ದರೂ ಕೂಡ ಜಿಲ್ಲೆಯ ಕೇರಳ ಗಡಿ ಭಾಗಗಳಲ್ಲಿ ಲಾಟರಿ ಹಾವಳಿಗಳು ಹೆಚ್ಚುತ್ತಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಲಾಟರಿ ಹಾವಳಿ ನಡೆಯುವಂತ ಪ್ರದೇಶಗಳಿಗೆ ನಿರಂತರ ಭೇಟಿ ಪರಿಶೀಲನೆ ನಡೆಸಿ ಲಾಟರಿ ದಂಧೆ ನಡೆಸುತ್ತಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಎಸಿಪಿ ಮನೋಜ್ ಕುಮಾರ್ ನಾಯ್ಕ್, ಡಿವೈಎಸ್‍ಪಿ ಮಂಜುನಾಥ ಆರ್ ಜಿ, ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತ ( ಪಶ್ಚಿಮ ವಲಯ) ಡಿ.ರಂಗರಾಜು, ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಸಹಾಯಕ ನಿರ್ದೇಶಕ ಎಂ.ಪಿ ಪ್ರಸನ್ನ, ಪಿಂಚಣಿ , ಸಣ್ಣ ಉಳಿತಾಯ ಅಭಿವೃದ್ಧಿ ಅಧಿಕಾರಿ ಆನಂದ್ ಎಂ.ಪಿ, ಪ್ರಥಮ ದರ್ಜೆ ಸಹಾಯಕಿ ಅನಿತಾ ಲಕ್ಷ್ಮೀ ಎಂ.ಎಚ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು