11:23 PM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ಸುಳ್ಳು ಮಾಹಿತಿ ಹರಡಿದ ಆರೋಪ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯಲ್ಲಿ ಎಫ್​ಐಆರ್ ದಾಖಲು

08/11/2024, 13:00

ಹಾವೇರಿ(reporterjarnataka.com): ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.
ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸಂಸದರು ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದರು. ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬರೆದಿದ್ದರು. ರಾಜ್ಯದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ ಸಂಸದರು ಟ್ವೀಟ್ ಮಾಡಿದ್ದರು.
ರೈತ‌ ರುದ್ರಪ್ಪ ಅವರ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಬರೆದಿದ್ದರು. ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ. ಇದೀಗ ಈ ಟ್ವೀಟ್​ ಅನ್ನು ಅಳಿಸಿಹಾಕಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು