3:04 AM Wednesday10 - December 2025
ಬ್ರೇಕಿಂಗ್ ನ್ಯೂಸ್
ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ ರಾಜ್ಯದಲ್ಲಿ 37,48,700 ವಸತಿ ರಹಿತರು: ವಿಧಾನ ಪರಿಷತ್ ನಲ್ಲಿ ಸಚಿವ ಜಮೀರ್ ಖಾನ್ ಬೆಂಗಳೂರು ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯದಲ್ಲಿ ಧರ್ಮ ಮತ್ತು ಸಂಸ್ಕೃತಿ ಅಧ್ಯಯನ ಕೇಂದ್ರ ಉದ್ಘಾಟನೆ ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ…

ಇತ್ತೀಚಿನ ಸುದ್ದಿ

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನೂತನ ಶಸ್ತ್ರ ಚಿಕಿತ್ಸ ಕೊಠಡಿ ಕಾರ್ಯಾರಂಭ

09/11/2024, 16:08

ಮಂಗಳೂರು(reporter Karnataka.com): ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನ ಹಾಗೂ ಮಾರ್ಗದರ್ಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲನೇ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯಾರಂಭಕ್ಕೆ ಸಹಕಾರ ಮಾಡಿದ್ದಾರೆ. ಮೊದಲ ದಿವಸ ಡಾ ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಜನರ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದರು. ಡಾ ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪು ಗಟ್ಟಿದ ರೋಗಿಗೆ ತುರ್ತು ಶಸ್ತ್ರ ಚಿಕಿತ್ಸೆ ಮಾಡಿದರು. ಡಾ ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆ ಆಗದ ಹಾಗೆ ನೆರವೇರಿಸಿದರು.
ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ನಸಿರ್ಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಇದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಷ್, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.
ಡಿಸೆಂಬರ್ 1ರಿಂದ ಶಸ್ತ್ರ ಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರ ಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‍ಗಳು ಈ ಭಾಗದ ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು