6:37 PM Monday15 - September 2025
ಬ್ರೇಕಿಂಗ್ ನ್ಯೂಸ್
ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ

ಇತ್ತೀಚಿನ ಸುದ್ದಿ

ಸಾಮಾಜಿಕ ಜಾಲತಾಣದಿಂದ ಮಾಹಿತಿ:ಸಂಪೂರ್ಣ ಹದ ಗೆಟ್ಟ ರಸ್ತೆ ದುರಸ್ತಿಗೆ ಸಿಡ್ನಿಯಿಂದ ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಸ್ಪೀಕರ್ ಖಾದರ್ ಕರೆ

09/11/2024, 16:24

ಮಂಗಳೂರು(reporterkarnataka.com):ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲೆಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಕ್ಷೇತ್ರದ ರಸ್ತೆ ಸಂಪೂರ್ಣ ಹದಗೆಟ್ಟಿರುವ ವಿಚಾರ ಸಾಮಾಜಿಕ ಜಾಲತಾಣದ ಮುಖಾಂತರ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ತಕ್ಷಣ ರಸ್ತೆ ದುರಸ್ತಿ ಸರಿಪಡಿಸಲು ಸೂಚನೆ ನೀಡಿದ್ದಾರೆ.
ಮಂಗಳೂರು ವಿಧಾನ‌ಸಭಾ ಕ್ಷೇತ್ರದ ತೊಕ್ಕೊಟ್ಟು-ಕುತ್ತಾರು-ಮುಡಿಪು,ಮಂಗಳೂರು ವಿಧಾನಸಭಾ ಕ್ಷೇತ್ರದ ಗಡಿ ಪ್ರದೇಶವಾದ ಮುದುಂಗಾರು ಕಟ್ಟೆ ತನಕ‌ ಸುಮಾರು 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಕೂಡ ಮುಗಿದಿದೆ.
ಮಳೆಗಾಲದಲ್ಲಿ ಡಾಂಬಾರು ಘಟಕ ಸ್ಥಗಿತವಾದ ಕಾರಣ ಮಳೆಗಾಲ‌ ಮುಗಿದ ತಕ್ಷಣ ಕೆಲಸ ಪ್ರಾರಂಭಿಸಲಾಗುವುದು.
ಈಗಾಗಲೇ ತೊಕ್ಕೊಟ್ಟು ಕುತ್ತಾರು ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಕೆಲಸ ಪ್ರಾರಂಭವಾಗಿದೆ, ಅಲ್ಲಿಯವರೆಗೆ ತಾತ್ಕಾಲಿಕ ದುರಸ್ಥಿ ಮಾಡಲು ತಕ್ಷಣ ಸೂಚಿಸಲಾಗಿದೆ.
ಜಿಲ್ಲೆಯ ಎಲ್ಲಾ ಕ್ಷೇತ್ರದ ಬಹುತೇಕ ರಸ್ತೆಗಳು ಮಳೆಗಾಲದಲ್ಲಿ ಹದಗೆಟ್ಟಿದ್ದರು ಮಂಗಳೂರು ವಿಧಾನ ಸಭಾ ಕ್ಷೇತ್ರದ ತೊಕ್ಕೊಟ್ಟು ಕುತ್ತಾರು ರಸ್ತೆಯ ಬಗ್ಗೆ ಕಾಳಜಿ ವಹಿಸಿ ಸಾಮಾಜಿಕ ಜಾಲತಾಣದಲ್ಲಿ‌ ಮಾಹಿತಿ ನೀಡಿದವರಿಗೆ ಕ್ಷೇತ್ರದ ಶಾಸಕರಾಗಿ ಸ್ಪೀಕರ್ ಯು.ಟಿ ಖಾದರ್ ಕೃತಜ್ಞತೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು