5:37 PM Friday10 - January 2025
ಬ್ರೇಕಿಂಗ್ ನ್ಯೂಸ್
ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2…

ಇತ್ತೀಚಿನ ಸುದ್ದಿ

ಬಿಪಿಎಲ್ ಕಾರ್ಡ್ ರದ್ದು ಸೇರಿದಂತೆ ರೇಷನ್ ಕಾರ್ಡ್ ಅವ್ಯವಸ್ಥೆಯನ್ನು ವಿರೋಧಿಸಿ ಸಿಪಿಎಂ ಪ್ರತಿಭಟನೆ

09/11/2024, 16:31

ಮಂಗಳೂರು(reporterkarnataka.com):ಪಾನ್ ಕಾರ್ಡಿಗೆ ಆಧಾರ್ ಲಿಂಕ್ ಮಾಡಲು ಆದ ವಿಳಂಬಕ್ಕೆ ದಂಡ ಕಟ್ಟಿದ ಅಸಂಖ್ಯಾತ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಿರುವ ಕ್ರಮವನ್ನು ಕೂಡಲೇ ವಾಪಸ್ ಪಡೆಯಬೇಕು, ರದ್ದುಗೊಳಿಸಿರುವ ಬಿಪಿಎಲ್ ಕಾರ್ಡ್ ಗಳನ್ನು ಕೂಡಲೇ ವಾಪಸ್ ನೀಡಬೇಕು,ರೇಷನ್ ಕಾರ್ಡ್ ನಲ್ಲಿರುವ ಹಲವಾರು ಗೊಂದಲ, ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ಒತ್ತಾಯಿಸಿ ಸಿಪಿಎಂ ಉಳ್ಳಾಲ ಹಾಗೂ ಮುಡಿಪು ವಲಯ ಸಮಿತಿಗಳ ಜಂಟಿ ನೇತ್ರತ್ವದಲ್ಲಿ ನಾಟೆಕಲ್ ನಲ್ಲಿರುವ ಉಳ್ಳಾಲ ತಾಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಜ್ಞಾಪೂರ್ವಕವಾಗಿ ನಾಶಪಡಿಸಲು ಹೊರಟಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಪ್ರತಿಭಟನಾಕಾರರು ಆಕ್ರೋಶಭರಿತರಾಗಿ ಘೋಷಣೆ ಕೂಗಿದರು.
ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟ್ಟು, ಕೇಂದ್ರ ಸರ್ಕಾರ,ಈ ಹಿಂದೆ ಬಿಪಿಎಲ್ ಕಾರ್ಡ್ ಪರಿಶೀಲನೆಗೆ, ಪ್ಯಾನ್ ನಂಬರ್ ಗೆ ಆಧಾರ್ ಲಿಂಕ್ ಮಾಡಬೇಕೆಂದು ಆದೇಶ ನೀಡಿತ್ತು. ಜನರಿಗೆ ಇದರ ಕುರಿತು ಸರಿಯಾದ ಮಾಹಿತಿ ಇಲ್ಲದ್ದರಿಂದ ನಿಗದಿತ ಗಡುವಿನೊಳಗೆ ಆಧಾರ್ ಲಿಂಕ್ ಮಾಡಲು ಸಾಧ್ಯವಾಗಲಿಲ್ಲ. ಅದನ್ನು ದಂಡನೆಗೊಳಪಡಿಸಲು ಕೇಂದ್ರ ಸರಕಾರ ನಿರ್ಧರಿಸಿ ದಂಡ ವಿಧಿಸಿತು. ತಡವಾಗಿ ಲಿಂಕ್ ಮಾಡಿದವರು ಆದಾಯ ತೆರಿಗೆ ಇಲಾಖೆಗೆ ಒಂದು ಸಾವಿರ ರೂ ದಂಡ ಪಾವತಿಸಿದ್ದರು ಮತ್ತು ಇದನ್ನು ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆ ದಂಡವನ್ನೇ ಆದಾಯವೆಂದು ಪರಿಗಣಿಸಿತು. ಇದು ಬಡವರನ್ನು ಸೌಲಭ್ಯದಿಂದ ಹೊರದೂಡಲು ನೆರವಾಯಿತು. ಕೇಂದ್ರ ಸರಕಾರದ ಈ ನಡೆ ಸ್ಪಷ್ಟವಾಗಿ ಜನ ವಿರೋಧಿಯಾಗಿದೆ. ಬಡವರನ್ನು ಸೌಲಭ್ಯದಿಂದ ಹೊರಗಿಡುವ ತಂತ್ರದ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಪಿಎಂ ಉಳ್ಳಾಲ ವಲಯ ಸಮಿತಿಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಇತ್ತೀಚೆಗೆ, ರಾಜ್ಯದ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆಯು ಬಿಪಿಎಲ್ ಕಾರ್ಡಗಳ ಆರ್ಹತೆ ಪರಿಶೀಲನೆಗೆ ಕ್ರಮವಹಿಸಿ, ಪ್ಯಾನ್ ನಂಬರ್ ಗೆ ಆಧಾರ್ ನಂಬರ್ ಲಿಂಕ್ ವಿಳಂಬಕ್ಕೆ ಆದಾಯ ತೆರಿಗೆ ಇಲಾಖೆಗೆ ದಂಡ ಪಾವತಿಸಿದ್ದ ರಾಜ್ಯದ ಬಿಪಿಎಲ್ ಕಾರ್ಡ್ ಕುಟುಂಬಗಳನ್ನು ಈ ಇಲಾಖೆಯು ಸರಿಯಾಗಿ ಗಮನಿಸದೆ, ಆದಾಯ ತೆರಿಗೆ ಪಾವತಿದಾರರ ಪಟ್ಟಿಗೆ ಸೇರಿಸಿತಲ್ಲದೆ, ರಾಜ್ಯದ ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಡಗಳನ್ನು ಅವಸರದಲ್ಲಿ ಕಡಿತ ಮಾಡಿತು. ಇದು ಮತ್ತೊಂದು ದೊಡ್ಡ ತಪ್ಪಾದ ನಡೆಯಾಗಿದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಎಂ ಮುಡಿಪು ವಲಯ ಸಮಿತಿ ಕಾರ್ಯದರ್ಶಿ ರಫೀಕ್ ಹರೇಕಳರವರು, ರಾಜ್ಯದ ಅಪಾರ ಸಂಖ್ಯೆಯ ನೈಜ ಬಿಪಿಎಲ್ ಕಾರ್ಡದಾರರು ತೊಂದರೆಗೊಳಗಾಗಿದ್ದಾರೆ. ಸರಕಾರದ ಯಾವುದೇ ಸಹಾಯ/ ಸೌಲಭ್ಯ ಪಡೆಯಲು ಬಿಪಿಎಲ್ ಕಾರ್ಡ್ ತೋರುವುದು ಮಾನದಂಡವಾಗಿರುವುದರಿಂದ ಈ ದುರುದ್ದೇಶ ಪೂರಿತ ಅವಸರದ ತಪ್ಪಾದ ನಡೆಯು ಅವರನ್ನು ಅನೇಕ ಸೌಲಭ್ಯಗಳಿಂದ ವಂಚಿತರನ್ನಾಗಿಸಿದೆ ಎಂದು ಹೇಳಿದರು.
ಪ್ರತಿಭಟನೆ ಲಯನ್ನುದ್ದೇಶಿಸಿ ಸಿಪಿಎಂ ಜಿಲ್ಲಾ ನಾಯಕರಾದ ಕ್ರಷ್ಣಪ್ಪ ಸಾಲ್ಯಾನ್, ಜಯಂತ ನಾಯಕ್ ರವರು ಮಾತನಾಡಿದರು.ಪ್ರತಿಭಟನೆಯಲ್ಲಿ ಸಿಪಿಎಂ ಉಳ್ಳಾಲ ವಲಯ ಸಮಿತಿ ಮುಖಂಡರಾದ ಪದ್ಮಾವತಿ ಶೆಟ್ಟಿ, ಸುಂದರ ಕುಂಪಲ, ಶೇಖರ್ ಕುಂದರ್, ಪ್ರಮೋದಿನಿ ಕಲ್ಲಾಪು, ಜನಾರ್ಧನ ಕುತ್ತಾರ್, ಬಾಬು ಶೆಟ್ಟಿ ಪಿಲಾರ್, ಇಬ್ರಾಹಿಂ ಮದಕ, ಸಿಪಿಎಂ ಮುಡಿಪು ವಲಯ ಸಮಿತಿ ನಾಯಕರಾದ ರಾಮಚಂದ್ರ ಪಜೀರ್, ರಿಜ್ವಾನ್ ಹರೇಕಳ, ರಜಾಕ್ ಮೊಂಟೆಪದವು, ರಜಾಕ್ ಮುಡಿಪು,ಅಸ್ಪಕ್ ಅಲೇಕಳ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು