4:19 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಭರ್ಜರಿ ಗೆಲುವು

09/11/2024, 22:30

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಭರ್ಜರಿ ಗೆಲುವು ಸಾಧಿಸಿದೆ.


ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸುಮಾರು 16 ವರ್ಷಗಳಿಂದ ಗೆಲುವು ಸಾಧಿಸಿಕೊಂಡು ಬಂದಿರುವ ವಿದ್ಯಾರ್ಥಿ ಪರಿಷತ್ ಇಂದು ಕೂಡ ಗೆಲುವಿನ ನಗೆ ಬೀರಿದೆ.
ಕಳೆದ ಮೂರು ವರ್ಷಗಳಿಂದ 32 ತರಗತಿ ಅಭ್ಯರ್ಥಿಗಳಲ್ಲಿ ಗೆಲುವು ಸಾಧಿಸಿಕೊಂಡು ಬಂದಿದ್ದು, ಈ ಬಾರಿ 33 ಸ್ಥಾನಗಳಲ್ಲಿ 33 ಸ್ಥಾನಗಳನ್ನು ಕೂಡಾ ವಿದ್ಯಾರ್ಥಿ ಪರಿಷತ್ ಪರವಾಗಿ ಗೆದ್ದು ಕೊಂಡಿದೆ.
ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಸಾತ್ವಿಕ್ , ಕಾರ್ಯದರ್ಶಿಯಾಗಿ ಕೀರ್ತನ್ , ಸಹ ಕಾರ್ಯದರ್ಶಿಯಾಗಿ ನಂದಿತಾ ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾ ಶೆಟ್ಟಿ, ಸಾಂಸ್ಕೃತಿಕ ಸಹ ಕಾರ್ಯದರ್ಶಿಯಾಗಿ ಅನನ್ಯ ಇವರುಗಳು ಜವಾಬ್ದಾರಿ ಸ್ವೀಕರಿಸಿದರು.
ಚುನಾವಣಾ ಪ್ರಕ್ರಿಯೆಯ ನಂತರದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ತರಗತಿ ನಾಯಕರುಗಳು ಸೇರಿ ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ವಿಜಯಾತ್ರೆ ನಡೆಸಿ ಮೆರವಣಿಗೆ ಪುರಭವನದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ಪ್ರತೀಕ್ ಬಂಟ್ವಾಳ , ಮಂಗಳೂರು ಮಹಾನಗರ ಕಾರ್ಯದರ್ಶಿಗಳಾದ ಮೋನಿಶ್ ತುಮಿನಾಡು ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮರಾಠಿ ಮತ್ತು ವಿದ್ಯಾರ್ಥಿನಿ ವಿಸ್ತಾರಕ್ ಆದ ಶ್ರೀ ಲಕ್ಷ್ಮೀ‌ ಹಾಗೂ ಮಂಗಳಗೌರಿ ಯು.ಸಿ.ಎಂ ಕಾಲೇಜು ಘಟಕದ ಅಧ್ಯಕ್ಷ ನಿಖಿತ್ ಹಾಗೂ ಶಾಶಂಕ್, ಹಿತೇಶ್ ಮತ್ತು ಮಂಗಳೂರು ಮಹಾನಗರದ ಪ್ರಮುಖರು ಸೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು