5:37 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಗ್ರಾಮ ಪಂಚಾಯತ್ ಉಪ ಚುನಾವಣೆ: ಪಿಲಿಕುಳ ಕಂಬಳ ಮುಂದೂಡಿಕೆ

12/11/2024, 20:43

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka.com): ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ.
ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಲಾದ ದಿನಾಂಕವನ್ನು ನಂತರದ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿ.ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು