6:41 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಪವಿತ್ರ ಯಾತ್ರಾ ಸ್ಥಳ ಸುತ್ತೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ರಂಗಸ್ವಾಮಿ ಅವಿರೋಧ ಆಯ್ಕೆ

14/11/2024, 20:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರರ ನೆಲೆವೀಡು ಹಾಗೂ ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಸುತ್ತೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಜೀಮರಳ್ಳಿ ರಂಗಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ


ಪರಿಶಿಷ್ಟ ಜಾತಿ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ 30 ತಿಂಗಳ ಅಧ್ಯಕ್ಷ ಸ್ಥಾನಕ್ಕೆ ಅಧಿಕಾರ ಹಂಚಿಕೆ ಪ್ರಕಾರ ಹಿಂದಿನ ಅಧ್ಯಕ್ಷರಾದ ಬಿ. ಸಿ. ರವಿ ರಾಜೀನಾಮೆ ನೀಡಿದ ಹಿನ್ನೆಲೆ ಉಳಿದ 15 ತಿಂಗಳಿಗೆ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದೆ.
21 ಸದಸ್ಯ ಸ್ಥಾನ ಹೊಂದಿರುವ ಗ್ರಾಮ ಪಂಚಾಯಿತಿಯಲ್ಲಿ ಇಂದು ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ 17 ಮಂದಿ ಹಾಜರಾಗಿ ನಾಲ್ಕು ಮಂದಿ ಗೈರು ಹಾಜರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಂಗಸ್ವಾಮಿ ಒಬ್ಬರೇ ನಾಮಪತ್ರ ಸಲ್ಲಿಸಿ ಬೇರೆ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಕಾರಣ ರಂಗಸ್ವಾಮಿಯವರನ್ನು ಅಧ್ಯಕ್ಷರನ್ನಾಗಿ ಚುನಾವಣೆ ಅಧಿಕಾರಿ ಘೋಷಣೆ ಮಾಡಿದರು.
ಚುನಾವಣಾ ಅಧಿಕಾರಿಯಾಗಿ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಸುಹಾಸ್ ಕಾರ್ಯನಿರ್ವಹಿಸಿ ಚುನಾವಣಾ ಪ್ರಕ್ರಿಯೆ ಬಗ್ಗೆ ಮಾತನಾಡಿದರು. ನೂತನ ಅಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಹಂಚಿ ಸಂಭ್ರಮಿಸಿದರು.
ಇದೇ ಸಂದರ್ಭ ನೂತನ ಅಧ್ಯಕ್ಷರಿಗೆ ಹಾಗೂ ಸದಸ್ಯರುಗಳಿಗೆ ಪಕ್ಷದ ಮುಖಂಡರು ಕಾರ್ಯಕರ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಾಲು ಹೊದಿಸಿ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಬಳಿಕ ನೂತನ ಅಧ್ಯಕ್ಷರಾದ ರಂಗಸ್ವಾಮಿ ಮಾತನಾಡಿ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ ಇಂದು ನಾನು ಈ ಹುದ್ದೆಗೇರಲು ಸಾಧ್ಯವಾಗಿದೆ. ಅಂತೆಯೇ ನನ್ನ ತಂದೆ ತಾಯಿಗಳ ಆಶೀರ್ವಾದ ಹಾಗೂ ಪಂಚಾಯತಿ ಸದಸ್ಯರುಗಳ ಸಹಕಾರ ಬೆಂಬಲದಿಊ ನಾನು ಅಧ್ಯಕ್ಷ ಸ್ಥಾನಕ್ಕೆ ಕೂರಲು ಅವಕಾಶವಾಗಿದೆ. ನಮ್ಮ ಸದಸ್ಯರಿಗೆ ನಾನು ಸದಾ ಚಿರಋಣಿಯಾಗಿದ್ದು ಅವರ ಸಹಕಾರದೊಂದಿಗೆ ಪಂಚಾಯಿತಿ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.
ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ಉಪಾಧ್ಯಕ್ಷೆ ರಾಣಿ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು