6:55 AM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ ತಾಲೂಕು ವಕೀಲರಿಂದ ಅನಿರ್ದಿಷ್ಟ ಪ್ರತಿಭಟನೆ: ನ್ಯಾಯಾಲಯ ಕಲಾಪಕ್ಕೆ ಬಹಿಷ್ಕಾರ

14/11/2024, 20:52

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ನ್ಯಾಯಾಲಯದ ವಕೀಲರು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗದೆ ಅನಿರ್ಧಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಹಲವು ವರ್ಷಗಳ ವಕೀಲರ ಬೇಡಿಕೆಯಂತೆ ಪಟ್ಟಣದಿಂದ ಚಿಂತಾಮಣಿ ಸಂಪರ್ಕ ಕಲ್ಪಿಸುವ ರಸ್ತೆ ಕಾಲೋನಿ ಕ್ರಾಸ್ ಬಳಿ ೫ ಎಕರೆ ಪ್ರದೇಶದಲ್ಲಿ ಅಂದಾಜು ೧೫ ಕೋಟಿ ವೆಚ್ಚದಲ್ಲಿ ನೂತನ ನ್ಯಾಯಾಲಯ ಹಾಗೂ ನ್ಯಾಯಾಧೀಶರ ವಸತಿ ಗೃಹಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು ನೂತನವಾಗಿ ನಿರ್ಮಾಣವಾಗುತ್ತಿರುವ ನ್ಯಾಯಾಲಯದ ಕಲಾಪ ಆವರಣ ತುಂಬಾ ಚಿಕ್ಕದಾಗಿದೆಯೆಂದು ವಕೀಲರು ಬೇಸರ ವ್ಯಕ್ತಪಡಿಸಿ ಹಲವು ಬಾರಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರು. ಮನವಿ ಮಾಡಿದರೂ ಸಹ ಕಾಮಗಾರಿಯನ್ನು ಮುಂದುವರಿಸುತ್ತಿದ್ದಾರೆ ಎಂದು ವಕೀಲರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು.
ಇದೇ ಸಂದರ್ಭದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ, ನಮ್ಮ ತಾಲ್ಲೂಕಿಗೆ ನೂತನ ನ್ಯಾಯಾಲಯ ಸಂಕೀರ್ಣ ಮಂಜೂರಾತಿಯಾಗಿದ್ದು ತ್ವರಿತಗತಿಯಲ್ಲಿ ನ್ಯಾಯಾಲಯದ ಕಾಮಗಾರಿಯನ್ನು ಮಾಡಲಾಗುತ್ತಿದೆ. ಹೊಸ ಕಟ್ಟಡಗಳ ನಮೂನೆ ಪ್ರಕಾರ ಬಂಗಾರಪೇಟೆ, ಮುಳಬಾಗಿಲು ಹಾಗೂ ಶಿಡ್ಲಘಟ್ಟದಲ್ಲಿ ನೂತನ ನ್ಯಾಯಾಲಯ ಸಂಕೀರ್ಣಗಳು ನಿರ್ಮಾಣವಾಗಿದ್ದು ಬಹಳ ಸುಸೂತ್ರವಾಗಿ ಬಹಳ ಅಚ್ಚುಕಟ್ಟಾಗಿ ನಿರ್ಮಾಣ ಮಾಡಲಾಗಿದೆ. ಅದೇ ರೀತಿಯಾಗಿ ನಮ್ಮ ತಾಲ್ಲೂಕಿನಲ್ಲಿ ಚಿಂತಾಮಣಿ ಮುಖ್ಯ ರಸ್ತೆ ಕಾಲೋನಿ ಕ್ರಾಸ್ ಸಮೀಪ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು ಕಲಾಪದ ಆವರಣ ಬಹಳ ಚಿಕ್ಕದಾಗಿದ್ದು ಮುಂದಿನ ಪೀಳಿಗೆ, ವಕೀಲರು ಹಾಗೂ ಕಕ್ಷಿದಾರರಿಗೆ ಅನುಕೂಲವಾಗುವಂತೆ ನ್ಯಾಯಾಲಯದ ಕಲಾಪ ಆವರಣವನ್ನು ವಿಶಾಲವಾಗಿ ಮಾಡಬೇಕು ಎಂದು ಹಲವು ಬಾರಿ ಮನವಿ ಮಾಡಿದರು ಸಹ ಕಾಮಗಾರಿಯನ್ನು ಅದೇ ರೀತಿಯಾಗಿ ಮುಂದುವರೆಸುತ್ತಿರುವ ಕಾರಣ ತಾಲ್ಲೂಕಿನ ಎಲ್ಲಾ ವಕೀಲರು ಸಹ ಕಲಾಪಗಳಿಗೆ ಹಾಜರಾಗದೇ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಸಮಸ್ಯೆ ಬಗೆಹರಿಸುವ ತನಕ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ವೆಂದು ಸಹ ತಿಳಿಸಿದರು. ಈ ಸಂದರ್ಭದಲ್ಲಿ ಎಲ್ಲಾ ವಕೀಲರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು