1:10 PM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

71ನೇ ಅಖಿಲ ಭಾರತ ಸಹಕಾರ ಸಪ್ತಾಹ: ಆತ್ಮಶಕ್ತಿ ಸೌಧದಲ್ಲಿ ಧ್ವಜಾರೋಹಣ

15/11/2024, 19:05

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ನಿರ್ದೇಶಕರಾದ ಗೋಪಾಲ್ ಎಂ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸಂಘದ ಸದಸ್ಯರಿಗೆ ಸಹಕಾರಿ ಸಪ್ತಾಹದ ಅಂಗವಾಗಿ 1000 ದಿನಗಳ ಠೇವಣಿಗಳಿಗೆ ಶೇ. 10.50 ವರಗೆ ಆಕರ್ಷಕ ಬಡ್ಡಿ ಯೋಜನೆಯನ್ನು ಜಾರಿಗೊಳಿಸಿದೆ. ಜೊತೆಗೆ ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 6262/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುವುದೆಂದು ತಿಳಿಸಿದರು.
ಆತ್ಮವಿಶ್ವಾಸ ಮಕ್ಕಳ ವಿಶೇಷ ಠೇವಣಿ ಯೋಜನೆ ಹಾಗೂ 555_ ದಿವಸಗಳ ಠೇವಣಿ ಮೇಲೆ 9.70% ರ ವರೆಗೆ ಆಕರ್ಷಕ ಬಡ್ಡಿ ಕೊಡುಗೆಯನ್ನು ನೀಡುವುದಾಗಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು