ಇತ್ತೀಚಿನ ಸುದ್ದಿ
ಮಹಿಳಾ ದೌರ್ಜನ್ಯ: ಕಾನೂನು ಅರಿವು ಮಾಹಿತಿ ಕಾರ್ಯಾಗಾರ
16/11/2024, 23:36
ಮಂಗಳೂರು(reporterkarnataka.com): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಪೊಲೀಸ್ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ದಕ್ಷಿಣ ಕನ್ನಡ ಜಿಲ್ಲೆಯ ಸಹಯೋಗದೊಂದಿಗೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ಕುರಿತು ಮಾಹಿತಿ ಕಾರ್ಯಾಗಾರ ಶುಕ್ರವಾರ ನಡೆಯಿತು.
ಕಾರ್ಯಕ್ರಮವನ್ನು ರೆಡ್ ಕ್ರಾಸ್ ಸಂಸ್ಥೆಯ ಸದಸ್ಯ ಜಾನ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಉರ್ವ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕಿ ಭಾರತಿ ಮಾತನಾಡಿ, ಮಹಿಳೆಯರ ಮೇಲೆ ಆಗುತ್ತಿರುವ ಅಪರಾಧಗಳ ಕುರಿತು ಮಾಹಿತಿ ನೀಡುತ್ತಾ ಮಹಿಳೆಯರ ಸುರಕ್ಷತೆಗಿರುವ ವ್ಯವಸ್ಥೆಗಳು ಮತ್ತು ಕಾನೂನುಗಳ ಬಗ್ಗೆ ಹಾಗೂ ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್. ಎ. ಅಧ್ಯಕ್ಷತೆ ವಹಿಸಿದ್ದರು, ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕುಮಾರ, ಜಿಲ್ಲಾ ಮಿಷನ್ ಸಂಯೋಜಕ ಅನುಷ್ಯ, ನಿಶಾ, ಕಾವ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಖಿ ನಿವಾಸ, ಅಂಗನವಾಡಿ ಕಂ ಕ್ರμï, ಸಖಿ ಒನ್ ಸ್ಟಾಪ್ ಸೆಂಟರ್, ವಾತ್ಸಲ್ಯ ಶಿಶು ಪಾಲನಾ ಕೇಂದ್ರ, ರಾಜ್ಯ ಉದ್ಯೋಗಸ್ಥ ಮಹಿಳಾ ವಸತಿ ನಿಲಯ, ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಂ. ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಜೆಂಡರ್ ಸ್ಪೆಷಲಿಸ್ಟ್ ವಿಶಾಲಾಕ್ಷಿ ವಂದಿಸಿದರು. ಮಾತೃವಂದನ ಯೋಜನೆ ಸಂಯೋಜಕಿ ಅಶ್ವಿನಿ ನಿರೂಪಿಸಿದರು.