5:14 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಸಡಗರ -ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿದ ಚಿಕ್ಕ ಜಾತ್ರಾ ಮಹೋತ್ಸವ

17/11/2024, 16:07

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಇಂದು ಚಿಕ್ಕ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು.


ಬೆಳಿಗ್ಗೆ 10.45 ರಿಂದ 11:30 ಘಂಟೆ ಒಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರೀ ಶ್ರೀಕಂಠೇಶ್ವರ ಸ್ವಾಮಿಯವರ ಚಿಕ್ಕ ಜಾತ್ರಾ ರಥೋತ್ಸವ ನಡೆಯಿತು. ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಆಚಾರ್ಯತ್ವದಲ್ಲಿ ರಥಕ್ಕೆ ಪೂಜೆ ಸಲ್ಲಿಸಿ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಮತ್ತಿತರ ಗಣ್ಯರು ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ಕೊಟ್ಟರು. ಇದಕ್ಕೂ ಮೊದಲು ಬಣ್ಣ ಬಣ್ಣದ ಹೂ ಮತ್ತು ವಜ್ರಾಭರಣಗಳಿಂದ ಅಲಂಕೃತಗೊಂಡ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಹಾಗೂ ಶ್ರೀ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿ ಸೇರಿದಂತೆ ಶ್ರೀ ಗಣಪತಿ ಚಂಡಿಕೇಶ್ವರ ಹಾಗೂ ಶ್ರೀ ಮನೋನ್ಮಣಿ ಅಮ್ಮನವರ ಉತ್ಸವ ಮೂರ್ತಿಗಳಿಗೆ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು.
ನಂತರ ದೇವಾಲಯದ ಸುತ್ತ ಮೆರವಣಿಗೆ ತಂದ ಉತ್ಸವ ಮೂರ್ತಿಗಳನ್ನು ಬಣ್ಣ ಬಣ್ಣದ ಹೂ ಹಾಗೂ ಬಂಟಿಂಗ್ಸ್ ಮತ್ತು ಬಾವುಟಗಳಿಂದ ಅಲಂಕರಿಸಲಾಗಿದ್ದ ರಥಗಳಲ್ಲಿ ಕೂರಿಸಲಾಯಿತು. ನಂತರ ಸಾವಿರಾರು ಭಕ್ತರು ಹರ್ಷೋದ್ಗಾರದೊಂದಿಗೆ ರಥವನ್ನು ಎಳೆದು ತಮ್ಮ ಭಕ್ತಿ ಭಾವ ಮೆರೆದರು. ಮೊದಲಿಗೆ ಶ್ರೀ ಗಣಪತಿ ಹಾಗೂ ಚಂಡಿಕೇಶ್ವರ, ನಂತರ ಪಾರ್ವತಿ ಸಮೇತ ಶ್ರೀ ಶ್ರೀಕಂಠೇಶ್ವರ ಸ್ವಾಮಿ ಅದರ ಹಿಂದೆ ಶ್ರೀ ಮನೋನ್ಮಣಿ ಅಮ್ಮನವರ ರಥಗಳು ಒಂದರ ಹಿಂದೆ ಒಂದರಂತೆ ಪಟ್ಟಣದ ರಥ ಬೀದಿಯಲ್ಲಿ ಸಾಗಿ ಯಾವುದೇ ಅಡೆತಡೆ ಇಲ್ಲದೆ ಸ್ವಸ್ಥಾನ ಸೇರಿದವು.
ದೊಡ್ಡ ಜಾತ್ರೆಯಲ್ಲಿ 5 ಪಂಚಮಹಾ ರಥಗಳು ರಥೋತ್ಸವದಲ್ಲಿ ಭಾಗಿಯಾದರೆ ಚಿಕ್ಕ ಜಾತ್ರೆಯಲ್ಲಿ ದೊಡ್ಡ ರಥಗಳನ್ನು ಬಿಟ್ಟು ಚಿಕ್ಕ ಚಿಕ್ಕ ಮೂರು ರಥಗಳು ಮಾತ್ರ ಪಾಲ್ಗೊಳ್ಳುವುದು ವಿಶೇಷ.
ನಂಜನಗೂಡು ಸೇರಿದಂತೆ ವಿವಿಧಡೆಯಿಂದ ಸಾವಿರಾರು ಭಕ್ತರು ಇಂದು ಬೆಳಿಗ್ಗೆಯಿಂದಲೇ ದೇವಾಲಯಕ್ಕೆ ಬಂದು ಸರಥಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರಲ್ಲದೆ ಚಿಕ್ಕ ಜಾತ್ರಾ ರಥೋತ್ಸವದಲ್ಲೂ ಪಾಲ್ಗೊಂಡು ತೇರುಗಳಿಗೆ ಹಣ್ಣು- ಜವನ ಎಸೆಯುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಮಹೇಶ್, ಮಾಜಿ ಶಾಸಕ ಕಳಲೆ ಕೇಶವಮೂರ್ತಿ ,ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಸೇರಿದಂತೆ ನಗರಸಭಾ ಸದಸ್ಯರುಗಳು ಹಾಗೂ ಪುರ ಪ್ರಮುಖರು, ದೇವಾಲಯದ ಅರ್ಚಕ ವೃಂದದವರು ಉಪಸ್ಥಿತರಿದ್ದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ನಂಜನಗೂಡಿನ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಿದ್ದರು.
ಇದೇ ಸಂದರ್ಭ ಕೆಲವು ದಾನಿಗಳು ಒಂದು ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಿದರು.ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್ ಮಾತನಾಡಿ ಚಿಕ್ಕ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು‌.

ಇತ್ತೀಚಿನ ಸುದ್ದಿ

ಜಾಹೀರಾತು