1:57 AM Tuesday18 - November 2025
ಬ್ರೇಕಿಂಗ್ ನ್ಯೂಸ್
Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು: ಪನೀಂಧರ್

18/11/2024, 14:43

ಬಂಟ್ವಾಳ(reporterkarnataka.com):ಬಂಟ್ವಾಳ ವಕೀಲರ ಸಂಘ ಮತ್ತು ಕ್ಲೂ ಫಾರ್ ಎವಿಡೆನ್ಸ್ ಫೌಂಡೇಶನ್ (CLUE 4 EVIDENCE FOUNDATION) ಜಂಟಿ ಆಶ್ರಯದಲ್ಲಿ ಬಂಟ್ವಾಳ ವಕೀಲರ ಸಂಘದಲ್ಲಿ ವಿಧಿ ವಿಜ್ಞಾನ ಜಾಗ್ರತಿ ಕಾರ್ಯಾಗಾರ ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ CLUE 4 FOUNDATION ನ ನಿರ್ದೇಶಕರಾದ ಪನೀಂಧರ್ ಬಿ.ಎನ್. ಅವರು ವಕೀಲರಿಗೆ ವಿಧಿ ವಿಜ್ಞಾನದ ಜಾಗ್ರತಿಯ ಅಗತ್ಯತೆ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಕೇಂದ್ರ ಸರಕಾರ ಹೊಸದಾಗಿ ಜಾರಿಗೆ ತಂದ ಭಾರತೀಯ ನ್ಯಾಯ ಸಂಹಿತೆ ಕಾನೂನಿನಲ್ಲಿ 3 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷೆಯ ಅಪರಾಧಗಳಿಗೆ ವಿಧಿ ವಿಜ್ಞಾನದ ವರದಿ ಕಡ್ಡಾಯವಾಗಿದೆ. ಆದುದರಿಂದ ವಕೀಲರಿಗೆ ವಿಧಿ ವಿಜ್ಞಾನದ ಬಗ್ಗೆ ಮಾಹಿತಿ ಅತೀ ಅಗತ್ಯವಾಗಿದ್ದು, ಮುಂದಿನ ದಿನಗಳಲ್ಲಿ ಸಾಮಾನ್ಯ ಅಪರಾಧ ಕಡಿಮೆಯಾಗಲಿದ್ದು, ಡಿಜಿಟಲ್ ಅಪರಾಧಗಳು ಹೆಚ್ಚಾಗಳಿದ್ದು ಡಿಜಿಟಲ್ ಅಪರಾಧಗಳ ಬಗ್ಗೆ ಪ್ರತಿ ವಕೀಲರು ಜ್ಞಾನ ಹೊಂದಿರಬೇಕು ಎಂದು ವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿದ್ದರು.
ಬಂಟ್ವಾಳ ವಕೀಲರ ಸಂಘ ಅಧ್ಯಕ್ಷ ರಿಚರ್ಡ್ ಕೊಸ್ತಾ ಎಂ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ರವೀಂದ್ರ ಕುಕ್ಕಾಜೆ ನಿರ್ವಹಿಸಿದರು. ಅತಿಥಿ ಅಭ್ಯಾಗತರಿಗೆ ವೀರೇಂದ್ರ ಎಂ.ಸಿದ್ದಕಟ್ಟೆಯವರು ವಂದನೆ ಸಲ್ಲಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು