2:20 AM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಹೆಬ್ರಿ: ಎಎನ್ ಎಫ್-ನಕ್ಸಲರ ನಡುವೆ ಗುಂಡಿನ ಕಾಳಗ; ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಸಾವು

19/11/2024, 09:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು/ ಉಡುಪಿ
info.reporterkarnataka@gmail.com
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಸಮೀಪದ ಕಬ್ಬಿನಾಲೆ ಬಳಿ ನಕ್ಸಲ್ ನಿಗ್ರಹ ದಳ(ಎಎನ್ ಎಫ್) ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಬಲಿಯಾಗಿದ್ದಾನೆಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್​ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ಈ ಕೂಂಬಿಂಗ್​​ನಲ್ಲಿ ಕಬ್ಬಿನಾಲೆ ಮೂಲದ ವಿಕ್ರಂ ಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಗೆ ಈತ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. ಹತನಾಗಿದರುವ ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ.
ಇತ್ತೀಚೆಗೆ ಕೆಲವು ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದಲ್ಲಿ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು. ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಡಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು.
ನಂತರ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನಗಳು ವ್ಯಕ್ತವಾಗಿವೆ. ಕಳೆದ 15 ದಿನಗಳಿಂದ ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡದ ಅರಣ್ಯ ಭಾಗದಲ್ಲಿ ಎಎನ್‌ಎಫ್‌ ಕೂಂಬಿಂಗ್ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು