ಇತ್ತೀಚಿನ ಸುದ್ದಿ
ಭ್ರಷ್ಟ ಅಧಿಕಾರಿಗಳ ಬೇಟೆ: ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ದಿಢೀರ್ ದಾಳಿ
21/11/2024, 12:30

ಬೆಂಗಳೂರು(reporterkarnataka.com): ಮಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದಾರೆ.
ಬೆಂಗಳೂರು, ಮಂಗಳೂರು, ಮಂಡ್ಯ ಸೇರಿದಂತೆ 7 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಬೆಂಗಳೂರಿನ ಟೌನ್ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಅವರ ನಿವಾಸ ಮೇಲೆ ಲೋಕಾಯುಕ್ತ ದಾಳಿ ನದೆದಿದೆ.
ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿ ಎಸ್. ಪಿ. ಮೋಹನ್ ಅವರ ನಿವಾಸದ ಮೇಲೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಎಂ.ಸಿ. ಕೃಷ್ಣವೇಣಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಕೃಷ್ಣವೇಣಿ ಅವರು ಮಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ಅಲ್ಲಿಯೂ ದಾಳಿ ನಡೆಸಲಾಗಿದೆ.ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ.