12:13 PM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಪದುವಾ ಕಾಲೇಜಿನಲ್ಲಿ ಕುಟುಂಬ ದಿನ ಕಾರ್ಯಕ್ರಮ

21/11/2024, 20:09

ಮಂಗಳೂರು(reporterkarnataka.com): ವಿದ್ಯಾರ್ಥಿಗಳ ಪೋಷಕರು ಶಾಲೆಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ಮಾತ್ರ ಶಾಲೆ ಮತ್ತು ಪೋಷಕರ ನಡುವಿನ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಎಂದು ಎ.ಜೆ. ಶೆಟ್ಟಿ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಪ್ರೊಫೆಸರ್ ಆಗಿ ಸೇವೆಸಲ್ಲಿಸುತ್ತಿರುವ ಹಾಗೂ ಬೆಂದೂರ್ ಪ್ಯಾರಿಷ್ ಪಾಸ್ಪೋರೋಲ್ ಪರಿಷದ ನ ಅಧ್ಯಕ್ಷರಾಗಿರುವ ವಿನೋದ್ ಡಿಸೋಜ ಹೇಳಿದರು.

ಪಾದುವ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಮಹೋತ್ಸವದ ಅಂಗವಾಗಿ ಕಾಲೇಜಿನ ಸಭಾಗಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕುಟುಂಬ ದಿನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಕಾಲೇಜಿನಲ್ಲಿ ಪೋಷಕರನ್ನು ಸೇರಿಸಿಕೊಂಡು ಇಂತಹ ಕಾರ್ಯಕ್ರಮ ನಡೆಸುತ್ತಿರುವುದನ್ನು ನೋಡುವಾಗ ಕುಟುಂಬದ ಒಂದು ಕಾರ್ಯಕ್ರಮದಂತೆ ಕಾಣುತ್ತಿದೆ ಎಂದರು.
ಕಾಲೇಜಿನ ಆವರಣ ನಿರ್ದೇಶಕ ಫಾದರ್ ಅರುಣ್ ವಿಲ್ಸನ್ ಲೋಬೊ ರವರು ಮಾತನಾಡಿದರು.
ಪದುವಾ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಫಾದರ್ ವಾಲ್ಟರ್ ಡಿಸೋಜಾ ಅಧ್ಯಕ್ಷತೆಯನ್ನು ವಹಿಸಿದ್ದರು.
ಈ ಸಂದರ್ಭ ಹಲವು ಆಟೋಟ ಸ್ಪರ್ಧೆ ನಡೆಸಲಾಯಿತು. ಪೋಷಕರು ಮತ್ತು ಉಪನ್ಯಾಸಕರಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ
ಮಾರಿಯಟ್ ಮಸ್ಕರೇನ್ಹಸ್ ಅವರು ಸ್ಫರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿದರು.
ವೇದಿಕೆಯಲ್ಲಿ ಉಪನ್ಯಾಸಕರಾದ ಡಾ. ರಾಮ್ ಪ್ರಸಾದ್, ಪೋಷಕರಾದ ನಿತಾಶ ಅವರು ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಪಿಯು ಕಾಲೇಜಿನ ಉಪನ್ಯಾಸಕರು ಸಂಯೋಜಿಸಿದರು.
ವಿದ್ಯಾರ್ಥಿಗಳ ಪೋಷಕರು ಪ್ರಾರ್ಥಿಸಿದರು. ಪದುವಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಾರಿಯಟ್ ಮಸ್ಕರೇನ್ಹಸ್ ಸ್ವಾಗತಿಸಿದರು. ಧರಣೇಶ್ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಸವಿತಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು