3:46 PM Monday16 - February 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ

ಇತ್ತೀಚಿನ ಸುದ್ದಿ

ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

22/11/2024, 19:39

ತುಮಕೂರು(reporterkarnataka.com): ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತುಮಕೂರಿನ ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಬಸವಣ್ಣನವರು ಕರ್ಮ‌ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯ. ಬಹಳ ಮಂದಿ ಶಿಕ್ಷಿಣ ಪಡೆದಿರುತ್ತಾರೆ, ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾದರೆ, ಮನುಷ್ಯ ತಾರತಮ್ಯ ಪಾಲಿಸೋದು ಮಾಡಿದ್ರೆ ಅಂಥಾ ಶಿಕ್ಷಣದಿಂದ ಏನು ಪ್ರಯೋಜನ ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು. ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಈ ಹಕ್ಕು ಸುಮ್ಮನೆ ಬರಲಿಲ್ಲ. ಶೂದ್ರರ ರೀತಿ, ಮಹಿಳೆಯರನ್ನೂ ಸಂಪೂರ್ಣವಾಗಿ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿ ಮೂಲೆಯಲ್ಲಿ ಇರಿಸಲಾಗಿತ್ತು. ಆದರೆ ಈಗ ನಿರಂತರ ಹೋರಾಟದ ಫಲವಾಗಿ ಶಿಕ್ಷಣದ ಹಕ್ಕು ಬಂದಿದೆ. ಈ ಶಿಕ್ಷಣ ವೈಚಾರಿಕವಾಗಿರಬೇಕು, ವೈಜ್ಞಾನಿಕವಾಗಿರಬೇಕು ಎಂದರು.
ಹೇಳಿಕೊಳ್ಳೋಕೆ ವಿದ್ಯಾವಂತರು. ಆದರೆ, ಇವನು ನಮ್ ಜಾತಿಯವನಲ್ಲ, ಓಟು ಹಾಕೋದು ಬೇಡ ಅಂತಾರೆ. ಮತ್ತೆ ಕೆಲವರು ಇವನು ನಮ್ಮ ಜಾತಿಯವನು ಅದಕ್ಕೇ ಓಟು ಹಾಕಿ ಅಂತಾರೆ. ಅವನಿಗೆ ರಾಜಕೀಯ ಪ್ರಜ್ಞೆ , ತಿಳಿವಳಿಕೆ ಇದೆಯೊ, ಇಲ್ವೋ ಗೊತ್ತಿಲ್ಲ. ಕಾಳಜಿ ಇದೆಯೋ, ಇಲ್ವೋ ಗೊತ್ತಿಲ್ಲ. ಜಾತಿ ನೋಡು, ಓಟು ಹಾಕು ಅಷ್ಟೆ. ಇದಕ್ಕೆ ವಿದ್ಯೆ ಕಲಿಬೇಕಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು