12:15 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ವಕ್ಫ್‌ ಮಂಡಳಿಯಿಂದ ಭೂ ಕಬಳಿಕೆ: ದ.ಕ. ಜಿಲ್ಲಾ ಬಿಜೆಪಿಯಿಂದ ದಿನವಿಡೀ ಬೃಹತ್ ಪ್ರತಿಭಟನೆ

23/11/2024, 01:47

ಮಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ಹಾಗೂ ವಕ್ಫ್‌ ಮಂಡಳಿ ಹೆಸರಿನಲ್ಲಿ ನಡೆಯುತ್ತಿರುವ ವ್ಯಾಪಕ ಭೂಕಬಳಿಕೆ ಪ್ರಕರಣಗಳನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಮಿನಿ ವಿಧಾನಸೌಧದ ಮುಂದೆ ದಿನವಿಡೀ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಸಲಾಯಿತು.


ಸಾರ್ವಜನಿಕ ಕಂದಾಯ ಆಸ್ತಿಗಳನ್ನು, ರೈತರ ಜಮೀನುಗಳನ್ನು ಹಾಗೂ ಮಠ-ಮಂದಿರಗಳಿಗೆ ಸೇರಿದ ಸಾವಿರಾರು ವರ್ಷಗಳ ಹಳೆಯ ಸ್ವತ್ತುಗಳನ್ನು ವಕ್ಫ್‌ ಮಂಡಳಿಗೆ ಸರಕಾರ ನೀಡುತ್ತಿರುವುದನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸುತ್ತಿದೆ. ಅದರ ಭಾಗವಾಗಿ ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪ್ರತಿಭಟನೆ ಹಾಗೂ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಕಿಶೋರ್ ಪುತ್ತೂರು, ಮಾಜಿ ಎಂಎಲ್‌ಸಿ ಬಾಲಕೃಷ್ಣ ಭಟ್, ಪಕ್ಷದ ಹಿರಿಯರಾದ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವಾರ್, ರಾಜೇಶ್ ಕಾವೇರಿ, ಯುವ ಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಪೂಜಾ ಪೈ, ಪೂರ್ಣಿಮಾ, ಮಾಜಿ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಾಜಿ ಶಾಸಕರಾದ ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ ಹಾಗೂ ಎಲ್ಲ ಕಾರ್ಪೊರೇಟರ್‍‌ಗಳು, ಮಂಡಲಗಳ ಅಧ್ಯಕ್ಷರು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಹರಿಕೃಷ್ಣ ಬಂಟ್ವಾಳ, ರವೀಂದ್ರ ಉಳಿದೊಟ್ಟು, ಸಂತೋಷ್ ಕುಮಾರ್ ರೈ ಬೊಳಿಯಾರ್, ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು