10:37 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಉಪ ಚುನಾವಣೆ: 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ

23/11/2024, 11:14

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೂರೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.
ಬಹಳಷ್ಟು ಕುತೂಹಲ ಕೆರಳಿಸಿದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ. ಸಿ.ಪಿ. ಯೋಗೀಶ್ವರ್ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ಆಗಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಂದ ಮುನ್ನಡೆ ಸಾಧಿಸಿದ್ದಾರೆ. ಭರತ್ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಂಗಾರು ಹನುಮಂತು ಅವರಿಂದ ಮುನ್ನಡೆ ಸಾಧಿಸಿದ್ದಾರೆ.
ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ 2024ರ ನವೆಂಬರ್ 13ರಂದು ನಡೆದಿತ್ತು.
ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು ಹಾಗೂ ಸಂಡೂರಿನಲ್ಲಿ 76.24ರಷ್ಟು ಮತದಾನ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು