6:26 PM Saturday23 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್…

ಇತ್ತೀಚಿನ ಸುದ್ದಿ

ಚನ್ನಪಟ್ಟಣ ಫಲಿತಾಂಶ: ಕುಮಾರಸ್ವಾಮಿಗೆ ತೀವ್ರ ಮುಖಭಂಗ; ಸೇಡು ತೀರಿಸಿದ ಡಿಸಿಎಂ ಶಿವಕುಮಾರ್

23/11/2024, 13:01

ಚನ್ನಪಟ್ಟಣ(reporterkarnataka.com): ರಾಜ್ಯದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ತೀವ್ರ ಮುಖಭಂಗವಾಗಿದೆ. ಇದರೊಂದಿಗೆ ಲೋಕಸಭೆ ಚುನಾವಣೆಯಲ್ಲಿ ಸಹೋದರ ಡಿ.ಕೆ. ಸುರೇಶ್ ಅವರಿಗಾದ ಸೋಲಿನ ಸೇಡನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀರಿಸಿಕೊಂಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹಾಗೂ ಅವರ ಪುತ್ರ ಎಚ್.ಡಿ. ಕುಮಾರಸ್ವಾಮಿ ಅವರು ಸೇರಿಕೊಂಡು ಡಾ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಣಕ್ಕಿಳಿಸುವ ಮೂಲಕ ಡಿ.ಕೆ. ಸುರೇಶ್ ಅವರ ಸೋಲಿಗೆ ಕಾರಣರಾಗಿದ್ದರು. ಇದೀಗ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಡಿಸಿಎಂ ಶಿವಕುಮಾರ್ ಅವರು ತಮ್ಮ ಸೋದರನಿಗಾದ ಸೋಲಿನ ಸೇಡನ್ನು ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಪರಾಜಯಗೊಳಿಸುವ ಮೂಲಕ ತೀರಿಸಿಕೊಂಡಿದ್ದಾರೆ. ಬಿಜೆಪಿಯಿಂದ ಇತ್ತೀಚೆಗೆ ಬಂದ ಸಿ.ಪಿ. ಯೋಗೀಶ್ವರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡುವ ಮೂಲಕ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಟಕ್ಕರ್ ಕೊಟ್ಟಿದ್ದಾರೆ.
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆದಿತ್ತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೇ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಫಿಲ್ಡಿಗಿಳಿದ್ದರು. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕ್ಷೇತ್ರವಿಡೀ ಸುತ್ತಾಡಿ ಪುತ್ರನ ಪರ ಮತಯಾಚಿಸಿದ್ದರು. ಇದರೊಂದಿಗೆ ಇತ್ತ ಕಡೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಇದನ್ನು ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ವರ್ ಪರ ಪ್ರಚಾರ ನಡೆಸುವಾಗ ಸೋಲಾದರೆ, ಇದು ನನ್ನ ವೈಯಕ್ತಿಕ ಸೋಲು ಎಂದು ಧೈರ್ಯದಿಂದ ಹೇಳಿದ್ದರು. ಹಾಗೆ ಯೋಗೀಶ್ವರ್ ಗೆಲುವಿಗೆ ಸಾಕಷ್ಟು ದುಡಿದಿದ್ದರು. ಇದೀಗ ಕಾಂಗ್ರೆಸ್ ಗೆಲುವಿನೊಂದಿಗೆ ಶಿವಕುಮಾರ್ ಅವರು ಕೂಡ ಗೆಲುವಿನ ನಗು ಸೂಸಿದ್ದಾರೆ.

3 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಮೂರೂ ಕ್ಷೇತ್ರಗಳಲ್ಲಿಯೂ ಮುನ್ನಡೆ ಸಾಧಿಸಿದ್ದಾರೆ.
ಬಹಳಷ್ಟು ಕುತೂಹಲ ಕೆರಳಿಸಿದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗಿಂತ ಮುನ್ನಡೆ ಸಾಧಿಸಿದ್ದಾರೆ. ಸಿ.ಪಿ. ಯೋಗೀಶ್ವರ್ ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಪುತ್ರ ಆಗಿದ್ದಾರೆ.
ಶಿಗ್ಗಾವಿ ಕ್ಷೇತ್ರದ ಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಂದ ಮುನ್ನಡೆ ಸಾಧಿಸಿದ್ದಾರೆ. ಭರತ್ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ.
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಅವರು ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಬಂಗಾರು ಹನುಮಂತು ಅವರಿಂದ ಮುನ್ನಡೆ ಸಾಧಿಸಿದ್ದಾರೆ.
ಶಿಗ್ಗಾವಿ, ಸಂಡೂರು ಮತ್ತು ಚನ್ನಪಟ್ಟಣ ಮೂರು ವಿಧಾನಸಭಾ ಕ್ಷೇತ್ರಗಳಿಗೆ 2024ರ ನವೆಂಬರ್ 13ರಂದು ನಡೆದಿತ್ತು.
ಚನ್ನಪಟ್ಟಣದಲ್ಲಿ ಅತ್ಯಧಿಕ ಮತದಾನ 88.80% ರಷ್ಟು ಮತದಾನ ನಡೆದರೆ, ಶಿಗ್ಗಾವಿಯಲ್ಲಿ 80.48%ರಷ್ಟು ಹಾಗೂ ಸಂಡೂರಿನಲ್ಲಿ 76.24ರಷ್ಟು ಮತದಾನ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು