6:27 PM Saturday23 - November 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ… ಫೆಸ್ಟಿವಲ್ ಆಫ್ ಆಸ್ಟ್ರೇಲಿಯಾ: ಶಿಕ್ಷಣದ ಶ್ರೇಷ್ಠತೆ ಮತ್ತು ಪ್ರಿಮಿಯಂ ಎಫ್ & ಬಿ… ತೇಜಸ್ವಿ ಅವರು ನಡೆನುಡಿಯಲ್ಲಿ ಬಹುತೇಕ ಒಂದೇ ಎಂಬಂತೆ ಬದುಕಿದ ಅಪರೂಪದ ಲೇಖಕರು; ಡಾ.ಸಂಪತ್…

ಇತ್ತೀಚಿನ ಸುದ್ದಿ

ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​

23/11/2024, 13:23

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಕಾಂಗ್ರೆಸ್‌ ಸಂಸದ ಇ. ತುಕಾರಾಂ ಅವರ ರಾಜೀನಾಮೆಯಿಂದ ತೆರವಾಗಿದ್ದ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಅವರ ಪತ್ನಿ ಅನ್ನಪೂರ್ಣ ಅವರ 9645 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಬಿಜೆಪಿಯ ಬಂಗಾರು ಹನುಮಂತ ಅವರಿಂದ ಆರಂಭಿಕ ಸುತ್ತುಗಳಲ್ಲಿ ನಿಕಟ ಪೈಪೋಟಿ ಎದುರಿಸಿದ್ದ ಅವರು, ಅಂತಿಮ ಹಂತದಲ್ಲಿ ಕಾಂಗ್ರೆಸ್ 93,606 ಮತ ಪಡೆದಿದ್ದಾರೆ. ಬಿಜೆಪಿ 83961 ಮತ ಪಡೆದಿದೆ. ಅಧಿಕೃತ ಘೋಷಣೆ ಬಾಕಿ ಇದೆ.
ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಇ. ಅನ್ನಪೂರ್ಣ, ಬಿಜೆಪಿಯಿಂದ ಬಂಗಾರು ಹನುಮಂತ, ಕರ್ನಾಟಕ ಜನತಾ ಪಕ್ಷದಿಂದ ಅಂಜಿನಪ್ಪ ಎನ್‌., ಪಕ್ಷೇತರರಾಗಿ ಟಿ.ಎಂ.ಮಾರುತಿ, ಟಿ. ಎರ‍್ರಿಸ್ವಾಮಿ, ಎನ್.ವೆಂಕಣ್ಣ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್‌–ಬಿಜೆಪಿ ನಡುವೆ ತುರುಸಿನ ಪೈಪೋಟಿ ಏರ್ಪಟ್ಟಿತ್ತು.
ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 2,36,402 ಮತದಾರರಿದ್ದು, ಅದರಲ್ಲಿ 1,80,189 ಮತದಾರರು ತಮ್ಮ ಮತದ ಹಕ್ಕನ್ನು ಚಲಾಯಿಸಿದ್ದಾರೆ. 1,17,935 ಪುರುಷ ಮತದಾರರಲ್ಲಿ 90,922 ಪುರುಷರು ಮತ ಹಾಕಿದ್ದಾರೆ. 1,18,438 ಮಹಿಳಾ ಮತದಾರರಲ್ಲಿ 89,252 ಮಹಿಳೆಯರು ಮತದಾನ ಮಾಡಿದ್ದಾರೆ. 29 ಇತರೆ ಮತದಾರರ ಪೈಕಿ 12 ಮಂದಿ ಮತದಾನ ಮಾಡಿದ್ದಾರೆ. ಸಂಡೂರು ಕ್ಷೇತ್ರದಲ್ಲಿ ನವೆಂಬರ್‌ 13ರಂದು ಮತದಾನ ನಡೆದಿತ್ತು. ಇಂದು ಬಳ್ಳಾರಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆಕಾರ್ಯ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು