9:10 AM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ

23/11/2024, 16:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳೆಗದ್ದೆ ಹೊಸಪುರ ಗ್ರಾಮದಲ್ಲಿ ನಡೆದಿದೆ.


ಹೊಸಪುರ ಗ್ರಾಮದ ಪರಿಶಿಷ್ಟ ಪಂಗಡ ಸಮುದಾಯದ ಕುಟುಂಬವೊಂದರ ಗುಡಿಸಲು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಪರಿಶಿಷ್ಟ ಪಂಗಡದ ಹಸಲರು ಜನಾಂಗದ ಜ್ಯೋತಿ ಚಂದ್ರು ದಂಪತಿಗಳ ಗುಡಿಸಲು ಬೆಂಕಿಗೆ ಆಹುತಿಯಾಗಿದೆ. ವಾಸ ಮಾಡಲು ಮನೆಯಿಲ್ಲದೇ ಬೇಲಿಯ ಗುಡಿಸಲು ಕಟ್ಟಿಕೊಂಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ದಂಪತಿ ತಡಿಕೆಯಿಂದಲೇ ಮನೆ ನಿರ್ಮಿಸಿಕೊಂಡಿದ್ದರು. ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ದಂಪತಿ ಕೂಲಿಗೆ ಹೋಗಿದ್ದಾಗ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಬೆಂಕಿಯಿಂದ ಮನೆಯ ತಡಿಕೆ, ಪಾತ್ರೆ ಪಗಡೆ, ಬಟ್ಟೆ ಬರೆ, ದಾಖಲೆಗಳೆಲ್ಲಾ ಸುಟ್ಟುಹೋಗಿವೆ.
ಇದರಿಂದ ಬಡ ಕುಟುಂಬದ ದಂಪತಿ ಮತ್ತು ಶಾಲೆಗೆ ಹೋಗುತ್ತಿರುವ ಅವರ ಮಗ ಮತ್ತು ಮಗಳು ಅತಂತ್ರರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮಕ್ಕಳು ಪುಸ್ತಕಗಳು ಸಹ ಸುಟ್ಟುಹೋಗಿವೆ.
ಇವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು, ಸರ್ಕಾರದ ವಸತಿ ಯೋಜನೆಗಳಿಂದ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಮೂಡಿಗೆರೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಹರೀಶ್ ಪಲ್ಗುಣಿ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು