11:45 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಗೆಲುವಿನಿಂದ ಜವಾಬ್ದಾರಿ ಹೆಚ್ಚಿದೆ, ಜನರ ನಿರೀಕ್ಷೆ ಈಡೇರಿಸುವೆ: ಸಂಡೂರು ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ

23/11/2024, 17:07

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಸಂಡೂರಿನ ಮತದಾರರು ನಮ್ಮ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್‌ಗೆ ಮತ್ತೆ ಆಶೀರ್ವಾದ ಮಾಡಿದ್ದಾರೆ. ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಜನರ ನಿರೀಕ್ಷೆ ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುವುದೆ. ಅದಕ್ಕಾಗಿ ಇಂದಿನಿಂದ ದುಡಿಯುವೆ ಎಂದು ಸಂಡೂರು ಕ್ಷೇತ್ರದ ವಿಜೇತ ಕಾಂಗ್ರೆಸ್‌ ಅಭ್ಯರ್ಥಿ ಇ. ಅನ್ನಪೂರ್ಣ ಹೇಳಿದ್ದಾರೆ.
ಚುನಾವಣಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ಮೊದಲಿಗೆ ಸಂಡೂರಿನ ಜನತೆಗೆ ಧನ್ಯವಾದ ಅರ್ಪಿಸಿದರು.

ಸಂಡೂರಿನ ಜನ ಯಾವತ್ತೂ ಕಾಂಗ್ರೆಸ್‌ ಕೈ ಬಿಟ್ಟಿಲ್ಲ. ನಮ್ಮ ಅಭಿವೃದ್ಧಿ ಕಾರ್ಯಗಳು, ಗ್ಯಾರಂಟಿಗಳು, ಮಹಿಳೆಯೊಬ್ಬರಿಗೆ ಅವಕಾಶ ಮಾಡಿಕೊಟ್ಟಿದ್ದು, ಒಗ್ಗಟಿನ ಹೋರಾಟ ನಮ್ಮ ಗೆಲುವಿಗೆ ಕಾರಣವಾಗಿದೆ’ ಎಂದರು.
ನನ್ನ ಕ್ಷೇತ್ರದ ಜನ ನನಗೆ ನೀಡಿರುವ ಕೊಡುಗೆಯನ್ನು ನನ್ನ ಸೇವೆಯ ಮೂಲಕ ಮತ್ತೆ ಹಿಂದಿರುಗಿಸುವೆ. ಸಂಡೂರು ಕಾಂಗ್ರೆಸ್‌ ಭದ್ರಕೋಟೆ. ಅದನ್ನು ಭದ್ರಪಡಿಸುವ ಕೆಲಸ ಮಾಡುವುದಾಗಿ ಹೇಳಿದ್ದೆ. ಅದರಂತೆ ನಡೆದುಕೊಳ್ಳುವೆ ಎಂದು ತಿಳಿಸಿದರು.
2023ರ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಶೇ. 49ರಷ್ಟು ಮತ ಸಿಕ್ಕಿತ್ತು. ಈಗ ಶೇ. 51 ಮತ ಸಿಕ್ಕಿದೆ. ಅದರಂತೆ ನೋಡಿದರೆ ನಮ್ಮ ಮತ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.
ಬಳ್ಳಾರಿ ಮತ್ತು ಸಂಡೂರಿನ ಜನ ತುಕಾರಾಂ ಅವರನ್ನು ಸಂಸತ್‌ಗೆ, ನನ್ನನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ್ದಾರೆ. ವೈವಾಹಿಕ ಜೀನದಲ್ಲಿ ಪರಸ್ಪರ ಸಹಕಾರದೊಂದಿಗೆ ಬಾಳ್ವೆ ನಡೆಸಿದ ನಾವು, ರಾಜಕೀಯದಲ್ಲೂ ಪರಸ್ಪರ ಸಹಕರಿಸುತ್ತಲೇ ಕೆಲಸ ಮಾಡುತ್ತೇವೆ ಎಂದು ಅನ್ನಪೂರ್ಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಲೂಕಿನ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಅಡಿಗಲ್ಲು ಹಾಕಿದ್ದಾರೆ. ಸಂಡೂರು ಬಸ್‌ ನಿಲ್ದಾಣಕ್ಕೂ ಭೂಮಿ ಪೂಜೆ ಆಗಿದೆ. ಅದನ್ನು ಬೇಗ ಪೂರ್ಣಗೊಳಿಸುವೆ. ಅವುಗಳನ್ನು ಆದ್ಯತೆಯಾಗಿ ಪರಿಗಣಿಸುವೆ’ ಎಂದು ಇದೇ ವೇಳೆ ಅವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು