9:09 AM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ ರಾಜ್ಯ ಸರಕಾರ ಅಭಿನಂದನೆ

24/11/2024, 21:34

ಕೋಲಾರ(reporterkarnataka.com): ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ಅನುಕೂಲವಾಗುವ ದಿಸೆಯಲ್ಲಿ ಅವಧಿಗಿಂತ ಮುಂಚೆಯೇ ಗುರಿ ತಲುಪಿ ಕೋಲಾರ ಜಿಲ್ಲೆಯನ್ನು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿರುವಂತೆ ಮಾಡಿದ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ರಾಜ್ಯ ಸರ್ಕಾರ ಅಭಿನಂದಿಸಿದೆ.
ಕಂದಾಯ ಇಲಾಖೆಯ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರು ಈ ಕುರಿತು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರಿಗೆ ಅಭಿನಂದನಾ ಪತ್ರ ಬರೆದಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿಯಲ್ಲಿ ರಾಜ್ಯದ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆಯನ್ನು ನೀಡುವಲ್ಲಿ ಕೋಲಾರ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಸ್ವೀಕರಿಸಲಾಗಿರುವ 36718 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ 100ರಷ್ಟು ವಿಲೇವಾರಿ ಮಾಡಿ, 10 ಸಿನ್ಮಾ ಮೌಲ್ಯ ಪಡೆದಿರುತ್ತೀರಿ ಎಂದು ಅಭಿನಂದಿಸಿದ್ದಾರೆ. 9.99 ವಿಲೇವಾರಿ ಸೂಚ್ಯಂಕದ ಪ್ರಕಾರ ಕೋಲಾರ ಜಿಲ್ಲೆಯಲ್ಲಿ 10.99 ಪಟ್ಟು ನಿಗದಿತ ಅವಧಿಗೆ ಮುಂಚೆ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿದ್ದೀರಿ.
ಕೋಲಾರ ಜಿಲ್ಲೆ ಈ ವಿಷಯದಲ್ಲಿ ರಾಜ್ಯಕ್ಕೆ ಮುಂಚೂಣಿ ಸ್ಥಾನ ಪಡೆದಿದೆ. ನಾಡ ಕಚೇರಿ ಹಾಗೂ ಅಟಲ್ ಜಿ ಜನಸ್ನೇಹಿ ಕಚೇರಿಗಳ ಸಹಕಾರ ಮತ್ತು ಸಿಬ್ಬಂದಿಗಳ ಕಾರ್ಯತತ್ಪರತೆ ಶ್ಲಾಘನೀಯ ಎಂದು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು