1:55 PM Monday25 - November 2024
ಬ್ರೇಕಿಂಗ್ ನ್ಯೂಸ್
ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ನೀರು ಹರಿಸುವ ನಿರ್ಣಯದಿಂದ ನಮ್ಮ ಭಾಗದ ರೈತರಿಗೆ ಅನ್ಯಾಯ: ಮಾಜಿ ಸಚಿವ ನರಸಿಂಹ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: ಡಿ.1-3ರ ವರೆಗೆ ಉಪಲೋಕಾಯುಕ್ತರ ಭೇಟಿ; ಸಾರ್ವಜನಿಕ ಅಹವಾಲು ಸ್ವೀಕಾರ, ವಿಚಾರಣೆ

25/11/2024, 13:41

ಮಂಗಳೂರು(reporterkarnataka.com): ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಡಿಸೆಂಬರ್ 1 ರಿಂದ 3ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಡಿಸೆಂಬರ್ 2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಯಾರಿಗಾದರೂ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತಿಯ ಆಗಬೇಕಾದ ಕೆಲಸದಲ್ಲಿ ವಿಳಂಬ ಆಗಿದ್ದರೆ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಉಪಲೋಕಯುಕ್ತರಿಗೆ ಸಲ್ಲಿಸಬಹುದು.
ಡಿಸೆಂಬರ್ 3ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 4:30ರ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ಈಗಾಗಲೇ ದಾಖಲಾಗಿರುವ, ತನಿಖೆ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಲ್ಲಿ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಲಾಗುತ್ತದೆ.
ಜಿಲ್ಲೆಯ ಸಾರ್ವಜನಿಕರು ಉಪಲೋಕಾಯುಕ್ತರಿಗೆ ತಮ್ಮ ಅಹವಾಲು ಸಲ್ಲಿಸಬಹುದು. ದೂರುದಾರರು ಮತ್ತು ಎದುರುದಾರರು ನಿಗದಿತ ಸಮಯದಲ್ಲಿ ಹಾಜರಿರುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು