1:00 PM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

25/11/2024, 15:27

ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು.

ನಂತರ ಮಾತನಾಡಿದ ಶಾಸಕರು, ಮಹಿಳೆಯರು ಮನೆಯಲ್ಲೇ ಕುಳಿತು ಮಾಡುವ ಉದ್ಯೋಗದಲ್ಲಿ ಹೊಲಿಗೆಗೆ ಗ್ರಾಮೀಣ ಭಾಗದಿಂದ ಹಿಡಿದು ನಗರ ಭಾಗದವರೆಗೆ ಸದಾ ಬೇಡಿಕೆಯಿರುತ್ತದೆ. ಅನೇಕರ ಬಾಳಿಗೆ ಬೆಳಕಾಗಿರುವ ಈ ಹೊಲಿಗೆ ಯಂತ್ರವನ್ನು ಆರ್ಥಿಕ ಕಾರಣಗಳಿಂದಾಗಿ ಖರೀದಿಸುವ ಸಾಮರ್ಥ್ಯ ಹಲವರಿಗೆ ಇರುವುದಿಲ್ಲವಾಗಿದ್ದು ಇಂದು ಹೊಲಿಗೆ ಯಂತ್ರವನ್ನು ಪಡೆದಿರುವ ಈ ನಮ್ಮೆಲ್ಲ ಸಹೋದರಿಯರು ಸ್ವಾವಲಂಬಿಯಾಗಿ ಬದುಕು ನಡೆಸುವಂತಾಗಲಿ ಎಂದು ಹಾರೈಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು