12:15 PM Tuesday26 - November 2024
ಬ್ರೇಕಿಂಗ್ ನ್ಯೂಸ್
ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ… ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಅನ್ನಪೂರ್ಣಗೆ ಜಯ: ಬಿಜೆಪಿ ಮೈತ್ರಿಕೂಟಕ್ಕೆ ತೀವ್ರ ಮುಖಭಂಗ ​ ಮಹಾರಾಷ್ಟ್ರ: ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ? ಆರೆಸ್ಸೆಸ್ ಮುಖ್ಯಸ್ಥ ಡಾ. ಭಾಗವತ್ ಡಿ. 7ರಂದು ಕಲ್ಲಡ್ಕಕ್ಕೆ: ಶ್ರೀರಾಮ ವಿದ್ಯಾಕೇಂದ್ರ ಕ್ರೀಡೋತ್ಸವದಲ್ಲಿ… ಬೆಂಗಳೂರು ಮತ್ತು ಚೆನ್ನೈಗೆ ಆಸ್ಟ್ರೇಲಿಯನ್ ಡಿಜಿಟೆಕ್ ಟ್ರೇಡ್ ಮಿಷನ್ ಭೇಟಿ ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯ ಬೆಳೆಸಿಕೊಳ್ಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಎಂಸಿಸಿ ಬ್ಯಾಂಕಿನ 18ನೇ ಶಾಖೆ ಬೆಳ್ತಂಗಡಿಯಲ್ಲಿ ಉದ್ಘಾಟನೆ

26/11/2024, 11:10

ಬೆಳ್ತಂಗಡಿ(reporterkarnataka.com): ಎಂಸಿಸಿ ಬ್ಯಾಂಕಿನ 18ನೇ ಶಾಖೆಯು ಬೆಳ್ತಂಗಡಿಯ ಚರ್ಚ್ ರಸ್ತೆಯ ಹತ್ತಿರ, ಬೆಳ್ತಂಗಡಿ ಹೈವೆ, ವೈಬವ್ ಅರ್ಕೆಡ್‌ನ ನೆಲಮಹಡಿಯಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೊ ಉದ್ಘಾಟಿಸಿದರು. ಶಾಖೆಯನ್ನು ಬೆಳ್ತಂಗಡಿ ಹೋಲಿ ರೆಡೀಮರ್ ಚರ್ಚ್ನ ಧರ್ಮಗುರು ಅತೀ ವಂ. ಫಾ| ವಾಲ್ಟರ್ ಡಿಮೆಲ್ಲೊ ಆಶೀವರ್ಚಿಸಿದರು.


ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರೊಕ್ಯೂರೇಟರ್ ಅತೀ ವಂ. ಅಬ್ರಹಾಂ ಪಟ್ಟೆರಿಲ್ ಉದ್ಘಾಟಿಸಿದರು. ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಬೆಳ್ತಂಗಡಿ ಕಥೋಲಿಕ್ ಕ್ರೇಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಹೆನ್ರಿ ಲೋಬೊ ಉದ್ಘಾಟಿಸಿದರು. ಸಿರಿಯನ್ ವಿವಿದ್ದೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಅಧ್ಯಕ್ಷರಾದ ಅನಿಲ್ ಎ.ಜೆ. ಉಪಸ್ಥಿತದ್ದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಹಕಾರ ರತ್ನ ಅನಿಲ್ ಲೋಬೊ ವಹಿಸಿದ್ದರು. ಸಹಕಾರ ರತ್ನ ಅನಿಲ್ ಲೋಬೊ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಬ್ಯಾಂಕಿನ ಸೇವೆ ಮತ್ತು ಸೌಲಭ್ಯಗಳನ್ನು ಪರಿಚಯಿಸಲು ಬೆಳ್ತಂಗಡಿ ಪರಿಸರದಲ್ಲಿ ಬ್ಯಾಂಕಿನ ಸಿಬ್ಬಂದಿಗಳು ಬೇಟಿ ಮಾಡಿದ ಸಂದರ್ಭದಲ್ಲಿ ಬೆಳ್ತಂಗಡಿ ಪರಿಸರದ ಜನರು ನೀಡಿದ ಸಹಕಾರ ಮತ್ತು ಬೆಂಬಲಕ್ಕಾಗಿ ವಂದನೆಗಳನ್ನು ಸಲ್ಲಿಸಿದರು. ಶಾಖೆಯು ಪ್ರಾರಂಭವಾದ ಒಂದು ವರ್ಷದೊಳಗೆ ಲಾಭ ಗಳಿಸಲು ಮತ್ತು ಸಮಾಜಕ್ಕೆ ಸೇವೆ ಸಲ್ಲಿಸಲು ಸಹಕಾರ ಮತ್ತು ಬೆಂಬಲವನ್ನು ಕೋರಿದರು. ಇತರ ಖಾಸಗಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ಎಲ್ಲಾ ಸೇವೆಗಳನ್ನು ಎಂಸಿಸಿ ಬ್ಯಾಂಕ್ ಒದಗಿಸುತ್ತದೆ. ಬ್ಯಾಂಕನ್ನು ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಿಸುವುದರಿಂದ ಬ್ಯಾಂಕಿನ ಠೇವಣಿಗಳಿಗೆ ಆIಅಉಅ ವಿಮಾ ಸೌಲಭ್ಯವಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಗೂಗಲ್ ಪೇ ಮತ್ತು ಯುಪಿಐ ಪಾವತಿಗಳಂತಹ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಬ್ಯಾಂಕ್ ಬರಲಿದೆ ಎಂದು ಹೇಳಿ, ಬ್ಯಾಂಕಿನಲ್ಲಿರುವ ಖಾತೆಗಳಲ್ಲಿ ಸರಾಸರಿ ಒಂದು ಲಕ್ಷ ಇರುವ ಖಾತೆದಾರರಿಗೆ ಯಾವುದೇ ಸೇವಾ ಶುಲ್ಕವಿರುವುದಿಲ್ಲ. ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ವಿನಂತಿಸಿದರು. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯಶಸ್ವಿಗೊಳಿಸಿದ್ದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿ ಮುಂದಿನ ದಿನಗಳಲ್ಲಿ ಬ್ಯಾಂಕಿನ ಬೆಳವಣಿಗೆಗೆ ಸಹಕಾರ ಮತ್ತು ಬೆಂಬಲವನ್ನು ಕೋರಿದರು.
ಅತೀ ವಂದನೀಯ ಫಾ| ವಾಲ್ಟರ್ ಡಿಮೆಲ್ಲೊ ಮಾತನಾಡಿ ಬೆಳ್ತಂಗಡಿಯಲ್ಲಿ ನೂತನ ಶಾಖೆಯನ್ನು ಆರಂಭಿಸಿ ಗ್ರಾಹಕ ಸ್ನೇಹಿ ವಾತವಾರಣವನ್ನು ಒದಗಿಸಿದ ಬ್ಯಾಂಕಿನ ಆಡಳಿತ ಮಂಡಳಿ ಮತ್ತು ಸಿಬ್ಬಂದಿಯನ್ನು ಅಭಿನಂದಿಸಿದರು. ಬ್ಯಾಂಕಿನ ಮುಂದಿನ ಯೋಜನೆಗಳಿಗೆ ಆಶೀರ್ವಾದವನ್ನು ಕೋರಿ ಸಮಾಜದಲ್ಲಿ ವಿಶೇಷವಾಗಿ ಬಡವರು ಮತ್ತು ಕೆಳವರ್ಗದ ಜನರಿಗೆ ಬ್ಯಾಂಕ್ ವರದಾನವಾಗಲಿ ಎಂದು ಹಾರೈಸಿದರು.
ಮಾನಸಿಕ ಮತ್ತು ದೈಹಿಕವಾಗಿ ವಿಕಲಾಂಗ ವ್ಯಕ್ತಿಗಳು ಮತ್ತು ಅನಾಥರ ಆರೈಕೆಗಾಗಿ ಸಿಯೋನ್ ಅಶ್ರಮ್ ಟ್ರಸ್ಟ್, ಗುಂಡಿಬಾಗಿಲು ಮತ್ತು ಕೈಗೆಟಕುವ ದರದಲ್ಲಿ ಅತ್ಯುತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಫಾ| ಎಲ್. ಎಮ್. ಪಿಂಟೊ ಹೆಲ್ತ್ಕೇರ್ ಸೆಂಟರ್ ಚಾರಿಟೇಬಲ್ ಟ್ರಸ್ಟ್, ಬದ್ದಾ÷್ಯರ್ ಇವರಿಗೆ ಬ್ಯಾಂಕಿನ ಧತ್ತಿ ನಿಧಿಯಿಂದ ದೇಣಿಗೆಯನ್ನು ನೀಡಲಾಯಿತು.
ಮುಖ್ಯ ಅತಿಥಿಗಳಾಗಿದ್ದ ಬೆಳ್ತಂಗಡಿ ಧರ್ಮಪ್ರಾಂತ್ಯದ ಪ್ರೋಕುರೇಟರ್ ಅತೀ ವಂದನೀಯ ಪಾ| ಅಬ್ರಹಾಂ ಪಟ್ಟೆರಿಲ್ ಮಾತನಾಡಿ ಸುತ್ತಮುತ್ತಲಿನ ಇತರ ಬ್ಯಾಂಕ್‌ಗಳಿಗಿಂತ ಭಿನ್ನವಾಗಿ ಮಾನವೀಯತೆಯ ಸೇವೆಯ ಉದಾತ್ತ ಉದ್ದೇಶದಲ್ಲಿ ತೊಡಗಿರುವ ಸಂಸ್ಥೆ ಮತ್ತು ವ್ಯಕ್ತಿಗಳನ್ನು ಪ್ರೋತ್ಸಾಹಿಸುತ್ತಿರುವ ಎಂಸಿಸಿ ಬ್ಯಾಂಕನ್ನು ಶ್ಲಾಘಿಸಿದರು. ಬ್ಯಾಂಕಿನ ಬೆಳವಣಿಗೆಗೆ ಸಾರ್ವಜನಿಕರು ಪ್ರೋತ್ಸಾಹ ಮತ್ತು ಸಹಕಾರ ನೀಡಬೇಕೆಂದು ಕೋರಿದ ಅವರು ಸಮಾಜದ ಹಿತದೃಷ್ಟಿಯಿಂದ ಬ್ಯಾಂಕ್ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಬ್ಯಾಂಕಿನ ಸರ್ವತೋಮುಖ ಅಭಿವೃದ್ದಿಗೆ ಶುಭ ಹಾರೈಸಿದರು.
ಸಮಾಜ ಸೇವೆಗಾಗಿ ವಿಶೇಷವಾಗಿ ಅಪಘಾತಗಳಲ್ಲಿ ಗಾಯಗೊಂಡವರಿಗೆ ಮತ್ತು ನೈಸರ್ಗಿಕ ವಿಕೋಪಗಳಿಂದ ಹಾನಿಗೊಳಗಾದ ಜನರಿಗೆ ಸಹಾಯ ಮಾಡುತ್ತಿರುವ ಶ್ರೀ ಚಾರ್ಮಾಡಿ ಹಸನಬ್ಬ, ಕೃಷಿ ಮತ್ತು ತೋಟಗಾರಿಕೆಯಲ್ಲಿ ನವೀನ ಯೋಜನೆಗಳನ್ನು ಅನುಷ್ಟಾನಗೊಳಿಸಿದ ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಕೊಡುಗೆಗಾಗಿ ಕಾಸ್ಮಿರ್ ಮಿನೇಜಸ್, ಸಾಮಾನ್ಯ ಜನರಿಗೆ ವೈದಕೀಯ ಸೇವೆಗಳನ್ನು ಒದಗಿಸುವ ಜನರ ವೈದ್ಯರಾಗಿರುವ ಗುರುವಾಯನ್‌ಕೆರೆಯ ಡಾ| ವೇಣುಗೋಪಾಲ್ ಶರ್ಮ ಮತ್ತು ದೈಹಿಕ ಅಸಾಮರ್ಥದ ಹೊರತಾಗಿಯೂ ಶೈಕ್ಷಣಿಕ ಉತ್ಕçಷ್ಟತೆಯನ್ನು ಸಾಧಿಸಿದ
ಸಬಿತಾ ಮೋನಿಸ್ ಅವರನ್ನು ಅವರ ಸೇವೆ ಮತ್ತು ಸಾಧನೆಗಾಗಿ ಬ್ಯಾಕಿನಿಂದ ಗುರುತಿಸಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಬಿತಾ ಮೋನಿಸ್ ಬ್ಯಾಂಕಿನ ಸನ್ಮಾನಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿ ಬ್ಯಾಂಕಿಗೆ ಶುಭ ಹಾರೈಸಿದರು.
ಕಟ್ಟಡ ಮ್ಹಾಲಿಕರಾದ ಸೀತರಾಮ ಶೆಟ್ಟಿ ಮತ್ತು ಇಂಜೀನಿಯರ್ ಕಾರ್ತಿಕ್ ಕಿರಣ್ ಅವರನ್ನು ಸನ್ಮಾನಿಸಲಾಯಿತು. ಶಾಖೆಯಲ್ಲಿ ಮೊದಲ ಖಾತೆಯನ್ನು ತೆರೆದ ಗ್ರಾಹಕರನ್ನು ಸನ್ಮಾನಿಸಲಾಯಿತು. ಮೊದಲ ಖಾತೆ ತೆರೆದ ಸವಿತಾ ಬ್ಯಾಪ್ಟಿಸ್ಟ್ ಇವರ ಜನ್ನ ದಿನಾಚರಣೆಯನ್ನು ಈ ಸಂದರ್ಭದಲ್ಲಿ ಆಚರಿಸಲಾಯಿತು.
ಉಪಾಧ್ಯಕ್ಷ ಜೆರಾಲ್ಡ್ ಡಿಸಿಲ್ವಾ, ನಿರ್ದೆಶಕರಾದ ಡೆವಿಡ್ ಡಿಸೋಜ, ಅನಿಲ್ ಪತ್ರಾವೊ, ಮೆಲ್ವಿನ್ ವಾಸ್, ರೋಶನ್ ಡಿಸೋಜ, ಡಾ| ಫ್ರೀಡಾ ಡಿಸೋಜ, ಐರಿನ್ ರೆಬೆಲ್ಲೊ, ಡಾ| ಜೆರಾಲ್ಡ್ ಪಿಂಟೊ, ಎಲ್‌ರೊಯ್ ಕಿರಣ್ ಕ್ರಾಸ್ತೊ, ಜೆ.ಪಿ. ರೊಡ್ರಿಗಸ್, ಸಿ.ಜಿ.ಪಿಂಟೊ, ಸುಶಾಂತ್ ಸಲ್ಡಾನ್ಹಾ, ಆಲ್ವಿನ್ ಪಿ. ಮೊಂತೇರೊ, ಮಹಾಪ್ರಬಂಧಕರಾದ ಸುನಿಲ್ ಮಿನೇಜಸ್ ಹಾಜರಿದ್ದರು. ನಿರ್ದೇಶಕರಾದ ಲಸ್ರಾದೊ ಸ್ವಾಗತಿಸಿ ಶಾಖಾ ವ್ಯವಸ್ಥಾಪಕ ಶಾರುನ್ ಪಿಂಟೊ ವಂದಿಸಿದರು. ಅವಿಲ್ ಮೋರಾಸ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು