9:41 AM Tuesday30 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ

26/11/2024, 14:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದ ಹಳೆಯದಾದ ಹಾಗೂ ಪುರಾಣ ಪ್ರಸಿದ್ಧ ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಮಾಸದ ಅಂಗವಾಗಿ ದೀಪೋತ್ಸವ ಹಾಗೂ ನೂತನ ಕೊಳಗ ದಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ಅಂಗವಾಗಿ ದೇವಾಲಯವನ್ನು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಇದೇ ಸಂದರ್ಭ ನಂಜನಗೂಡಿನ ವೈದ್ಯ ದಂಪತಿಗಳಾದ ಡಾ. ಗೀತಾ ಹಾಗೂ ಡಾ. ರವಿ ಅವರು ನೂತನವಾಗಿ ಮಾಡಿಸಿಕೊಟ್ಟ ಹಿತ್ತಾಳೆ ಕವಚದ ಮೂರ್ತಿಯನ್ನು ಧಾರಣೆ ಮಾಡಿ ಬಣ್ಣದ ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೂಜಾ ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ದೀಪ ಹಚ್ಚುವ ಮೂಲಕ ದೇವರ ದರ್ಶನ ಪಡೆದು ತಮ್ಮ ಭಕ್ತಿ ನಮನ ಸಲ್ಲಿಸಿದರು. ಗ್ರಾಮದ ಯುವಕರ ನೇತೃತ್ವದಲ್ಲಿ ಬಂದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ದೇವಾಲಯದ ಪಾರುಪತ್ತೆಗಾರ ಜಯರಾಮ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿ ಶಿಥಿಲ ಗೊಳ್ಳುತ್ತಿರುವ ಆನಾದಿಕಾಲದ ಇಂತಹ ಪುರಾತನ ಪರಂಪರೆ ಉಳ್ಳ ದೇವಾಲಯಗಳ ರಕ್ಷಣೆಗೆ ತಾಲೂಕು ಮತ್ತು ಜಿಲ್ಲಾಡಳಿತ ಹಾಗೂ ಸಾರ್ವಜನಿಕರು ಮುಂದಾಗಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು