8:17 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ: ಶಾಸಕ ವೇದವ್ಯಾಸ್ ಕಾಮತ್

27/11/2024, 11:06

ಮಂಗಳೂರು(reporterkarnataka.com): ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿರಂತರ ಪ್ರಯತ್ನಗಳಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಾ|| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸ್ಥಾನಮಾನ ಗೌರವವನ್ನು ನೀಡಲಾಗಿದೆ. ಸಂವಿಧಾನ ಕರ್ತರು ಭಾರತದ ನೆಲ,ಸಂಸ್ಕøತಿ ಮತ್ತು ಸಾಮಾಜಿಕ ಹಿನ್ನೆಲೆಯನ್ನು ಗಮನದಲ್ಲಿಟ್ಟುಕೊಂಡು ಇಲ್ಲಿಗೆ ಪೂರಕವಾದ ಕಾನೂನುಗಳನ್ನು ಜಾರಿಗೆ ತರಲು ಶ್ರಮಿಸಿದ್ದಾರೆ. ವಿಶ್ವದ ಎಲ್ಲಾ ಸಂವಿಧಾನಗಳ ಸಾರವನ್ನು ಅರಿತುಕೊಂಡು, ಭಾರತದ ಸಂವಿಧಾನವನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು.
ಡಾ|| ಬಿ.ಆರ್ ಅಂಬೇಡ್ಕರ್ ಅವರ ಹುಟ್ಟಿದ ಸ್ಥಳ, ಅವರು ಓಡಾಡಿದ ಪರಿಸರ, ಕಲಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಅವರಿಗೆ ಸಂಬಂಧಪಟ್ಟ ಸ್ಥಳಗಳ ಅಭಿವೃದ್ಧಿಗೆ ಮತ್ತು ಅವರ ಇತಿಹಾಸವನ್ನು ರಕ್ಷಿಸಲು ಸರಕಾರವು ಯೋಜನೆ ರೂಪಿಸಿರುವುದು ಶ್ಲಾಘನೀಯ ಎಂದು ಶಾಸಕರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸಂವಿಧಾನ ಪೀಠಿಕೆ ಬೋಧಿಸಿದರು. ಮಂಗಳೂರು ಶ್ರೀ ಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಘುರಾಜ್ ಕದ್ರಿ, ಶ್ರೀ ನಾರಾಯಣಗುರು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ, ವಿಶ್ವವಿದ್ಯಾನಿಲಯ ಕಾಲೇಜಿನ ಉಪನ್ಯಾಸಕ ರಘು ಧರ್ಮಸೇನಾ ಅವರಿಂದ ಸಂವಿಧಾನ ಮಹತ್ವ ಹಾಗೂ ಸಾಗಿಬಂದ ಹಾದಿ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಮತ್ತಿತರರು ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಹೇಮಲತಾ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಸರೇಶ್ ಅಡಿಗ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು