2:59 PM Thursday28 - November 2024
ಬ್ರೇಕಿಂಗ್ ನ್ಯೂಸ್
ಅಡಿಕೆ ಬೆಳೆಗಾರರ ಸಮಸ್ಯೆ: ಕರಾವಳಿ ಸಂಸದರಿಂದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್… ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್… ಕರ್ತವ್ಯಲೋಪ: ಚಿಕ್ಕಮಗಳೂರು ನಗರ ಠಾಣೆ ಇನ್ಸ್ ಪೆಕ್ಟರ್ ರೇಣುಕಾ ಪ್ರಸಾದ್ ಅಮಾನತು ರಾಜ್ಯ ಸರಕಾರದ ಜನಪರ ಕೆಲಸಕ್ಕೆ ಮತದಾರರ ಜೈ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್… ತೀರ್ಥಹಳ್ಳಿ ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ: ತನಿಖೆ ಆರಂಭ ಕಳೆದ ಬಾರಿ ಅರ್ಧಂಬರ್ಧ ಸುಣ್ಣಬಣ್ಣ ಕಂಡ ತುಂಗಾ ಕಮಾನು ಸೇತುವೆಗೆ ಈ ಬಾರಿ… ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಲ್ಲಿ ಕೋಲಾರ ಪ್ರಥಮ: ಜಿಲ್ಲಾಧಿಕಾರಿ ಅಕ್ರಂ ಪಾಷಾಗೆ… ಚನ್ನಪಟ್ಟಣದಲ್ಲಿ ಸೋಲು: ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ ಕಾರ್ಯಕರ್ತ! ಮೂಡಿಗೆರೆ: ಬೆಂಕಿ ಆಕಸ್ಮಿಕದಲ್ಲಿ ಗುಡಿಸಲು ಸಂಪೂರ್ಣ ಭಸ್ಮ; ಬೀದಿಗೆ ಬಿದ್ದ ಬಡ ಕುಟುಂಬ ರಾಜ್ಯ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆ; ಕಾಂಗ್ರೆಸ್ ಭರ್ಜರಿ ಜಯ; ಕೇಸರಿ…

ಇತ್ತೀಚಿನ ಸುದ್ದಿ

ಕುಳಾಯಿ: ನಾಡದೋಣಿ ಮೀನುಗಾರ ಅಹವಾಲು ಆಲಿಸಿದ ಮೀನುಗಾರಿಕೆ ಸಚಿವ ಮಂಕಾಳ್ ವೈದ್ಯ

28/11/2024, 14:29

ಸುರತ್ಕಲ್(reporterkarnataka.com):ಕುಳಾಯಿ ಬಳಿ ನಿರ್ಮಾಣವಾಗುತ್ತಿರುವ ಮೀನುಗರಿಕಾ ಜೆಟ್ಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು,
ನಾಡದೋಣಿ ಮೀನುಗಾರರಿಗೆ ಅನುಕೂಲಕರವಾಗಿಲ್ಲ .ತಕ್ಷಣ ಬ್ರೇಕ್ ವಾಟರ್ ವಿಸ್ತರಣೆ ಸಹಿತ ಸರ್ವ ಋತು ಬಂದರು ಮಾಡಲು ಬೇಕಾದ ಕ್ರಮ ಕೈಗೊಳ್ಳ ಬೇಕು ಎಂಬ ಆಗ್ರಹದ ಹಿನ್ನಲೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಮನವಿ ಮೇರೆಗೆ ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ಮೀನುಗಾರರ ಸಭೆಯಲ್ಲಿ ಪಾಲ್ಗೊಂಡು ಅಹವಾಲು‌ ಆಲಿಸಿದರು.


ಐಐಟಿ ಚೆನ್ನೈ ನಿಂದ ವರದಿ ತಯಾರಿಸಿ ಬಳಿಕ ಕಾಮಗಾರಿ ಮುಂದುವರೆಸಲು ತೀರ್ಮಾನಿಸಲಾಯಿತು.
ಶಾಸಕ ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಾಮಗಾರಿಯ ಕುರಿತಂತೆ ಸಚಿವರಿಗೆ ಮಾಹಿತಿ ನೀಡಿದರು. ನಾಡದೋಣಿ ಮೀನುಗಾರಿಕೆಗೂ ಅನುಕೂಲವಾಗುವಂತೆ ಜೆಟ್ಟಿ ನಿರ್ಮಾಣವಾಗಬೇಕು ಎಂದು ಮೀನುಗಾರರು ಮನವಿ ಮಾಡಿದರು.
ಮೂಲ ಮೀನುಗಾರರ ಸಂಘ, ನಾಡದೋಣಿ , ಎನ್ ಎಂ ಪಿ ಎ, ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿ ದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು