7:19 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಪೌರ ಕಾರ್ಮಿಕರಿಗೆ 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ

29/11/2024, 23:10

ಮಂಗಳೂರು(reporterkarnataka.com): ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು 5 ಲಕ್ಷ ರೂ.ಗೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಫಾಯಿ ಕರ್ಮಚಾರಿ/ಮ್ಯಾನುವೆಲ್ ಸ್ಕ್ಯಾವೆಂಜರ್ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಹಾನಗರಪಾಲಿಕೆಯ ನಿಧಿಯಿಂದ 708 ಮಂದಿ ಪೌರಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ಖಾಸಗಿ ವಿಮಾ ಕಂಪೆನಿ ಮೂಲಕ ರೂ. 3 ಲಕ್ಷದ ಆರೋಗ್ಯ ವಿಮೆ ನೀಡಲಾಗಿದೆ. ಈ ವಿಮಾ ಮೊತ್ತವು ಕಡಿಮೆಯಾಗಿದ್ದು, ಗಂಭೀರ ಖಾಯಿಲೆ ಚಿಕಿತ್ಸೆಗಳಿಗೆ ಸಾಕಾಗುವುದಿಲ್ಲ ಎಂದು ಪೌರಕಾರ್ಮಿಕರಿಂದ ಮನವಿಗಳು ಬಂದಿದ್ದು, ಈ ನಿಟ್ಟಿನಲ್ಲಿ ಮುಂದಿನ ಸಾಲಿನಿಂದ ಆರೋಗ್ಯ ವಿಮಾ ಮೊತ್ತವನ್ನು ರೂ. 5 ಲಕ್ಷಕ್ಕೆ ಏರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಪೌರ ಕಾರ್ಮಿಕರ ಪಟ್ಟಿಯಲ್ಲಿ ನಕಲಿ ವ್ಯಕ್ತಿಗಳು ಸೇರ್ಪಡೆಯಾಗಿರುವ ದೂರಿನ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಅವರು ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಸೂಚಿಸಿದರು. ಸರಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಇತರೆ ಅನ್ಯ ಕೆಲಸಗಳಿಗೆ ಪೌರಕಾರ್ಮಿಕರನ್ನು ನಿಯೋಜಿಸಬಾರದು ಎಂದು ಈಗಾಗಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದರು.
ಸಂಜೀವಿನಿ ಒಕ್ಕೂಟದಲ್ಲಿ ದುಡಿಯುತ್ತಿರುವ ಸಿಬ್ಬಂಧಿಗಳಿಗೆ ಗುತ್ತಿಗೆದಾರರ ಬದಲು ಗ್ರಾಮ ಪಂಚಾಯತ್‍ಗಳ ನೇರ ಅಧೀನದಲ್ಲಿ ವೇತನ ಪಾವತಿಸುವ ಬಗ್ಗೆ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಪೌರಕಾರ್ಮಿಕರ ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲು ಈಗಾಗಲೇ ಪೌರಾಡಳಿತ ನಿರ್ದೇಶನಾಲಯದ ಮಾರ್ಗದರ್ಶನ ಕೋರಲಾಗಿದೆ ಎಂದು ಅವರು ತಿಳಿಸಿದರು.
*ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ*
ಇದೇ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಆಯಾ ಉಪವಿಭಾಗಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಪ್ರತೀ ತಿಂಗಳು ಕುಂದುಕೊರತೆ ಸಭೆ ನಡೆಸಬೇಕು ಎಂದು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ಕ್ರೀಡಾಪಟುಗಳಿಗೆ ಸೌಲಭ್ಯಗಳನ್ನು ಆಯಾ ಸ್ಥಳೀಯ ಸಂಸ್ಥೆಗಳು ತಮ್ಮ ಮೀಸಲು ನಿಧಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹೇಮಲತಾ ಅವರು, ಪ್ರಸಕ್ತ ಸಾಲಿನಲ್ಲಿ ಜನವರಿಯಿಂದ ನವೆಂಬರ್ 20ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 36 ಪ್ರಕರಣಗಳಲ್ಲಿ ರೂ. 34 ಲಕ್ಷ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಡಿಸಿಪಿ ಸಿದ್ಧಾರ್ಥ್ ಗೋಯಲ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ವಿವಿಧ ಇಲಾಖೆ ಅಧಿಕಾರಿಗಳು, ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು, ಪೌರಕಾರ್ಮಿಕರ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು