7:14 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ನಂಜನಗೂಡು: ಪವಾಡ ಪುರುಷ ಶ್ರೀ ಮಹದೇವ ತಾತ ಗದ್ದುಗೆಯಲ್ಲಿ ವಿಶೇಷ ಪೂಜೆ

01/12/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಾರ್ತಿಕ ಮಾಸ ದ ಅಮಾವಾಸ್ಯೆ ಹಿನ್ನೆಲೆ ಇಂದು ನಂಜನಗೂಡು ತಾಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸಂಗಮದಲ್ಲಿ ನಡೆದಾಡಿದ ದೇವರು ಎಂದೇ ಕರೆಯಲ್ಪಡುವ ಪವಾಡಪುರುಷ ಶ್ರೀ ಮಹಾದೇವ ತಾತ ಅವರ ಗದ್ದುಗೆಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.


ನಡೆದಾಡಿದ ದೇವರು ಎಂದೇ ಖ್ಯಾತಿ ಪಡೆದು ಹಲವಾರು ಪವಾಡಗಳ ಮುಖಾಂತರ ಪವಾಡ ಪುರುಷರಾಗಿ ಕೆಲ ವರ್ಷಗಳ ಕಾಲ ಇದೇ ಕ್ಷೇತ್ರದಲ್ಲಿ ಐಕ್ಯರಾದ ಶ್ರೀ ಮಹಾದೇವ ತಾತ ಅವರ ಗದ್ದುಗೆ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿದೆ. ಬೆಳಿಗ್ಗೆಯಿಂದಲೇ ಗದ್ದುಗೆಯಲ್ಲಿ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಶ್ರೀ ಅವರ ಗದ್ದುಗೆ ಹಾಗೂ ಅವರ ಪುತ್ತಳಿಯನ್ನು ಬಗೆ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕರಿಸಲಾಗಿತ್ತು .ಅಲ್ಲದೆ ಶ್ರೀ ಅವರ ಉತ್ಸವ ಮೂರ್ತಿಯನ್ನು ಶ್ರೀ ಮಠದ ಸುತ್ತ ಮೆರವಣಿಗೆ ನಡೆಸಲಾಯಿತು.
ಉತ್ತರ ಕರ್ನಾಟಕವು ಸೇರಿದಂತೆ ವಿವಿಧೆಡೆಯಿಂದ ಸಾವಿರಾರು ಭಕ್ತರು ಶ್ರೀ ಅವರ ಪುಣ್ಯಕ್ಷೇತ್ರಕ್ಕೆ ಬಂದು ಕಪಿಲಾ ನದಿಯಲ್ಲಿ ಮಿಂದು ಶ್ರೀಯವರ ಗದ್ದುಗೆಗೆ ವಿಶೇಷ ಪೂಜೆ , ಹರಕೆ ಹಾಗೂ ಪ್ರಾರ್ಥನೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ಇದೇ ಸಂದರ್ಭ ಶ್ರೀ ಮಹಾದೇವ ತಾತ ಅವರು ವಾಸಿಸುತ್ತಿದ್ದ ಪುಟ್ಟ ಮನೆ ಅವರು ಉಪಯೋಗಿಸುತ್ತಿದ್ದ ವಸ್ತುಗಳನ್ನು ಸಹ ಭಕ್ತರು ಕಣ್ತುಂಬಿಕೊಂಡು ಭಕ್ತಿ ನಮನ ಸಲ್ಲಿಸಿದರು. ಪೂಜೆಗೆ ಬಂದ ಸುಮಾರು 10 ಸಾವಿರಕ್ಕೂ ಹೆಚ್ಚು ಭಕ್ತರಿಗೆ ಶ್ರೀ ಕ್ಷೇತ್ರದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.
ಶ್ರೀ ಕ್ಷೇತ್ರದ ಅಧ್ಯಕ್ಷರಾದ ಶಿವರಾಜಪ್ಪ ಹಾಗೂ ಭಕ್ತರು ಮಾತನಾಡಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು