ಇತ್ತೀಚಿನ ಸುದ್ದಿ
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವೈಭವದ ಲಕ್ಷದೀಪೋತ್ಸವ ಸಂಪನ್ನ: ದಾಖಲೆ ಸಂಖ್ಯೆಯಲ್ಲಿ ನೆರೆದ ಭಕ್ತ ಸಾಗರ
02/12/2024, 14:17
ಮಂಗಳೂರು(reporterkarnataka.com): ದಕ್ಷಿಣ ಭಾರತದ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ
ಲಕ್ಷದೀಪೋತ್ಸವ ಸಂಪನ್ನಗೊಂಡಿತು. ದಾಖಲೆ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು.
ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ನ.26ರಿಂದ 30ರ ವರೆಗೆ ಸಂಭ್ರಮ- ಸಡಗರದಿಂದ ನಡೆಯಿತು.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಲಕ್ಷದೀಪೋತ್ಸವ ವೈಭವದಿಂದ ಜರುಗಿತು.
ನ.26ರಂದು ಮಂಗಳವಾರ 3 ಗಂಟೆಗೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ 25 ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಶಿವಪಂಚಾಕ್ಷರಿ ಪಠಣ ಮಾಡುತ್ತಾ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ನಂತರ ಮಂಜುನಾಥ ಸ್ವಾಮಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿಸಿದರು.
ಡಿ.1ರಂದು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಿತು.
ದಿನಾ ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಸಂಪನ್ನಗೊಂಡಿತು.