ಇತ್ತೀಚಿನ ಸುದ್ದಿ
ಫೆಂಗಲ್ ಚಂಡಮಾರುತ: ದ.ಕ., ಉಡುಪಿ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜಿಗಳಿಗೆ ನಾಳೆ ರಜೆ
02/12/2024, 20:02
ಮಂಗಳೂರು/ಉಡುಪಿ(reporterkarnataka.com): ಫೆಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ದ.ಕ. ಹಾಗೂ ಉಡುಪಿ ಜಿಲ್ಲೆಗಳ ಎಲ್ಲ ಶಾಲೆಗಳಿಗೆ ಹಾಗೂ ಪಿಯು ಕಾಲೇಜಿಗೆ ಡಿ.3ರಂದು ರಜೆ ಸಾರಲಾಗಿದೆ.
ಉಭಯ ಜಿಲ್ಲೆಗಳ ಅಂಗನವಾಡಿ, ಸರಕಾರಿ, ಸರಕಾರಿ ಅನುದಾನಿತ, ಅನುದಾನರಹಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಸಾರಲಾಗಿದೆ. ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಹಾಗೂ ವಿದ್ಯಾ ಕುಮಾರಿ ಅವರು ಆದೇಶ ನೀಡಿದ್ದಾರೆ.
ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ನದಿ, ಸಮುದ್ರ ದಂಡೆಗೆ ತೆರಳದಂತೆ ಸೂಚಿಸಲಾಗಿದೆ.