ಇತ್ತೀಚಿನ ಸುದ್ದಿ
ತುಮಕೂರು: ಭೀಕರ ರಸ್ತೆ ಅಪಘಾತ; 3 ಮಂದಿ ಮಹಿಳೆಯರ ದಾರುಣ ಸಾವು
02/12/2024, 23:54
ತುಮಕೂರು(reporterkarnataka.com): ಇಲ್ಲಿನ ಚಿಕ್ಕನಹಳ್ಳಿ ಬಳಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಬಸ್ಸೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ನಡೆದಿದೆ. ಸೋಮವಾರ ಮುಂಜಾನೆ ವೇಳೆ ಈ ಅಪಘಾತ ಸಂಭವಿಸಿದೆ. ಬಸ್ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಒಟ್ಟು 29 ಮಂದಿ ಪ್ರಯಾಣಿಕರಿದ್ದರು. ಅಪಘಾತದಲ್ಲಿ ಇಬ್ಬರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇನ್ನೂ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.