ಇತ್ತೀಚಿನ ಸುದ್ದಿ
ಫೆಂಗಲ್ ಚಂಡಮಾರುತ: ತಮಿಳುನಾಡಿನ 15 ಜಿಲ್ಲೆಗಳಲ್ಲಿ ಭಾರೀ ಮಳೆ, ಭೂಕುಸಿತ
03/12/2024, 18:29
ಚೆನ್ನೈ(reporterkarnataka.com): ಫೆಂಗಲ್ ಚಂಡಮಾರುತದ ಪರಿಣಾಮ
ತಮಿಳುನಾಡಿನ 15 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ. ಈ ಮಧ್ಯೆ ಸಮುದ್ರ ಪ್ರಕ್ಷುಬ್ಧಗೊಂಡಿದೆ.
ಮಳೆ ಪೀಡಿತ ಮೂರು ಜಿಲ್ಲೆಗಳಿಗೆ ತಮಿಳುನಾಡು ಸರಕಾರ 2,000 ಕೋಟಿ ಪರಿಹಾರ ಘೋಷಿಸಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ
ವಿಲ್ಲುಪುರಂ, ಕಡಲೂರು ಮತ್ತು ಕಲ್ಲಕುರಿಚಿ ಜಿಲ್ಲೆಗಳಿಗೆ 2,000 ಕೋಟಿ ರೂ. ಚಂಡಮಾರುತ ಪರಿಹಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಲ್ಲಿ ದೂರವಾಣಿ ಮೂಲಕ ಮಾತನಾಡಿ, ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ. ರಾಜ್ಯಕ್ಕೆ ಸಾಧ್ಯವಿರುವ ಎಲ್ಲ ಸಹಾಯ ಮತ್ತು ಬೆಂಬಲವನ್ನು ನೀಡುವ ಭರವಸೆಯನ್ನು ಮೋದಿಯವರು ನೀಡಿದ್ದಾರೆ ಎಂದು ತಮಿಳುನಾಡು ಸರ್ಕಾರದ ಮೂಲಗಳು ತಿಳಿಸಿವೆ.