3:39 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಎಚ್‌ಐವಿ ಸೋಂಕಿತರಿಗೆ ನೈತಿಕ ಬಲ ತುಂಬಬೇಕು: ನ್ಯಾ.ರಾಜೇಶ್ ಎನ್. ಹೊಸಮನೆ

03/12/2024, 20:54

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಎಚ್‌ಐವಿ ಸೋಂಕಿಗೆ ತುತ್ತಾದವರು ಖಾಯಿಲೆಗಿಂತ ಹೆಚ್ಚಾಗಿ ಮಾನಸಿಕವಾಗಿ ಭಯಭೀತರಾಗುತ್ತಾರೆ. ಸಮಾಜದಲ್ಲಿ ಎಲ್ಲಾ ರೀತಿಯ ಹಕ್ಕು ಹೊಂದಲು ಅವರು ಅರ್ಹರಿದ್ದು, ಅವರಿಗೆ ಸ್ಫೂರ್ತಿ, ಧೈರ್ಯ ಮತ್ತು ನೈತಿಕ ಬಲ ಒದಗಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಹೇಳಿದರು.
ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ “ಹಕ್ಕುಗಳನ್ನು ಪಡೆಯಲು ಸರಿಯಾದ ಮಾರ್ಗ ಅನುಸರಿಸೋಣ: ನನ್ನ ಆರೋಗ್ಯ ನನ್ನ ಹಕ್ಕು” ಎಂಬ ಘೋಷವಾಕ್ಯದಡಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
1980 ರ ದಶಕದಲ್ಲಿ ಕಂಡುಬಖದ ಎಚ್‌ಐವಿ ಸೋಂಕಿನಿಂದ ಹರಡುವ ಏಡ್ಸ್ ಖಾಯಿಲೆಯು, ಇಂದು ಜಗತ್ತಿನ ಎಲ್ಲಾ ರಾಷ್ಟçಗಳಲ್ಲಿ ತನ್ನ ಪ್ರಭಾವವನ್ನು ಬೀರಿದೆ. ಎಚ್.ಐ.ವಿ ಸೋಂಕಿತರನ್ನು ಮಾನವೀಯ ದೃಷ್ಟಿಯಿಂದ ನೋಡುವುದರ ಜೊತೆಗೆ ಧೈರ್ಯ ತುಂಬುವ ಕೆಲಸ ಮಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ ಎಂದರು.
ಎಚ್.ಐ.ವಿ ಸೋಂಕಿನಿAದ ಹರಡುವ ಏಡ್ಸ್ ಕಾಯಿಲೆಯ ಬಗ್ಗೆ ಜನರಲ್ಲಿ ಇರುವ ಭಯವನ್ನು ದೂರ ಮಾಡುವುದರ ಜೊತೆಗೆ ಎಚ್.ಐ.ವಿ ಏಡ್ಸ್ನಿಂದ ಉಂಟಾಗುವ ಕಳಂಕ ಮತ್ತು ತಾರತಮ್ಯ ಹೋಗಲಾಡಿಸಿ, ಹೊಸ ಪ್ರಕರಣ ಹಾಗೂ ಸಾವುಗಳನ್ನು ಸೊನ್ನೆಗೆ ತರಲು ಜಾಗೃತಿ ಮೂಲಕ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ. ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, 1980ರಲ್ಲಿ ಮೊದಲ ಬಾರಿಗೆ ಡಿ.1ರಂದು ಎಚ್.ಐ.ವಿ ಸೋಂಕಿನ ತಡೆಗಾಗಿ ಜಾಗತಿಕ ಒಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದೊಂದಿಗೆ ಜಾಗೃತಿ ಕಾರ್ಯಕ್ರಮ ಆರಂಭಿಸಲಾಯಿತು. ಸಮುದಾಯದ ಪ್ರತಿಯೊಬ್ಬರಿಗೂ ಸೋಂಕು ಹರಡುವ ವಿಧಾನ ಹಾಗೂ ಮುಂಜಾಗೃತೆಗಳ ಕುರಿತು ವ್ಯಾಪಕ ಪ್ರಚಾರ ಕಾರ್ಯವನ್ನು ಕೈಗೊಳ್ಳುವ ಮೂಲಕ ಪ್ರಸ್ತುತ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ಕಡಿಮೆಗೊಳಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್‌ಐವಿ ಭಾದಿತರಿಗೋಸ್ಕರ ಕಾರ್ಯನಿರ್ವಹಿಸುವ ವಿಮುಕ್ತಿ, ನಿತ್ಯ ಜೀವನ, ಸೌಖ್ಯ ಬೆಳಕು ಸಂಸ್ಥೆಗಳ ಮೂಲಕ ಲೈಂಗಿಕ ಅಲ್ಪ ಸಂಖ್ಯಾತರನ್ನು ಸಹ ಸೋಂಕಿಗೆ ಬಾಧಿತರಾಗದಂತೆ ನಿರಂತರ ತಪಾಸಣೆ ಹಾಗೂ ಜಾಗೃತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಹೆಚ್‌ಐವಿ ಸೋಂಕಿತ ಮಹಿಳೆ ಗರ್ಭಿಣಿಯಾದರೂ ಸಹ ಜನನವಾಗುವ ಮಗು ಹೆಚ್‌ಐವಿ ಸೋಂಕಿಲ್ಲದೇ ಜನಿಸಲು ಪರಿಣಾಮಕಾರಿಯಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ಸೋಂಕು ಹರಡದಂತೆ ಮುಂದಿನ ಪೀಳಿಗೆಗೆ ಸಂರಕ್ಷಿಸಲು ನಾವೆಲ್ಲರೂ ಶ್ರಮಿಸಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರ ಕುಮಾರ್, ನಿತ್ಯಜೀವನ ಸಂಸ್ಥೆಯ ಅಧ್ಯಕ್ಷರಾದ ಹೇಮಲತ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಡ್ಯಾಪ್ಕೋ ಮೇಲ್ವಿಚಾರಕ ಗಿರೀಶ್, ಎಆರ್‌ಟಿ ಆಪ್ತಸಮಾಲೋಚಕ ಗಣೇಶ್ ಜಿಲ್ಲಾ ಆಸ್ಪತ್ರೆಯ ವಿವಿಧ ವಿಭಾಗಗಳ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು